Featured

ಉಡುಪಿ : ನೇಹಾ ಹತ್ಯೆ ಮನಸ್ಸಿಗೆ ನೋವು ತಂದಿದೆ ; ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ  – Vishwanews24

ನೇಹಾ ಹತ್ಯೆ ಮನಸ್ಸಿಗೆ ನೋವು ತಂದಿದೆ ; ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

ಉಡುಪಿ: ಗುರುವಾರ ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿ ದುಷ್ಕರ್ಮಿಯಿಂದ ಅಮಾನುಷವಾಗಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಅವರ ಸಾವಿಗೆ ಕಂಬನಿ ಮಿಡಿದಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ದುಷ್ಕರ್ಮಿಯ ಕೃತ್ಯವನ್ನು ಖಂಡಿಸಿದ್ದಾರೆ.

ಭವಿಷ್ಯದ ಕನಸುಗಳಿಗಾಗಿ ಬಾಳಿ ಬದುಕಬೇಕಾಗಿದ್ದ, ಶಿಕ್ಷಣಾಭ್ಯಾಸ ಮಾಡುತ್ತಿದ್ದ ನೇಹಾ ಅವರ ಹತ್ಯೆ ಮನಸ್ಸಿಗೆ ನೋವು ತಂದಿದೆ. ಆಕೆಯನ್ನು ಅಮಾನುಷವಾಗಿ ಕೊಂದಿರುವ ವಿಕೃತ ಹಾಗೂ ಕ್ರೂರ ಮನಸ್ಥಿತಿಯ ಕೊಲೆಗಾರನ ಕೃತ್ಯವನ್ನು ಸುಸಂಸ್ಕೃತ ನಾಗರಿಕ ಸಮಾಜದ ಯಾರೂ ಒಪ್ಪುವುದಿಲ್ಲ. ಆತನ ಕೃತ್ಯಕ್ಕೆ ಕಾನೂನು ಕ್ರಮದಲ್ಲಿ ಕಠಿಣ ಶಿಕ್ಷೆಯಾಗಬೇಕು. ಮುಂದೆ ಸಮಾಜದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸಂಬಂಧಿಸಿದ ಇಲಾಖೆಗಳು ಎಚ್ಚರಿಕೆ ವಹಿಸಬೇಕು.

ನೇಹಾ ಅವರ ಪೋಷಕರ ಆಗ್ರಹದಂತೆ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಜಯಪ್ರಕಾಶ್ ಹೆಗ್ಡೆ ಅವರು, ನೇಹಾ ಅವರ ಹೆತ್ತವರು, ಸ್ನೇಹಿತರು ಹಾಗೂ ಸರ್ವ ನೊಂದ ಮನಸ್ಸುಗಳ ಜೊತೆ ನಾನಿರುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

21 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

22 hours ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago