ಉಡುಪಿ: ಗುರುವಾರ ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿ ದುಷ್ಕರ್ಮಿಯಿಂದ ಅಮಾನುಷವಾಗಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಅವರ ಸಾವಿಗೆ ಕಂಬನಿ ಮಿಡಿದಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ದುಷ್ಕರ್ಮಿಯ ಕೃತ್ಯವನ್ನು ಖಂಡಿಸಿದ್ದಾರೆ.
ಭವಿಷ್ಯದ ಕನಸುಗಳಿಗಾಗಿ ಬಾಳಿ ಬದುಕಬೇಕಾಗಿದ್ದ, ಶಿಕ್ಷಣಾಭ್ಯಾಸ ಮಾಡುತ್ತಿದ್ದ ನೇಹಾ ಅವರ ಹತ್ಯೆ ಮನಸ್ಸಿಗೆ ನೋವು ತಂದಿದೆ. ಆಕೆಯನ್ನು ಅಮಾನುಷವಾಗಿ ಕೊಂದಿರುವ ವಿಕೃತ ಹಾಗೂ ಕ್ರೂರ ಮನಸ್ಥಿತಿಯ ಕೊಲೆಗಾರನ ಕೃತ್ಯವನ್ನು ಸುಸಂಸ್ಕೃತ ನಾಗರಿಕ ಸಮಾಜದ ಯಾರೂ ಒಪ್ಪುವುದಿಲ್ಲ. ಆತನ ಕೃತ್ಯಕ್ಕೆ ಕಾನೂನು ಕ್ರಮದಲ್ಲಿ ಕಠಿಣ ಶಿಕ್ಷೆಯಾಗಬೇಕು. ಮುಂದೆ ಸಮಾಜದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸಂಬಂಧಿಸಿದ ಇಲಾಖೆಗಳು ಎಚ್ಚರಿಕೆ ವಹಿಸಬೇಕು.
ನೇಹಾ ಅವರ ಪೋಷಕರ ಆಗ್ರಹದಂತೆ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಜಯಪ್ರಕಾಶ್ ಹೆಗ್ಡೆ ಅವರು, ನೇಹಾ ಅವರ ಹೆತ್ತವರು, ಸ್ನೇಹಿತರು ಹಾಗೂ ಸರ್ವ ನೊಂದ ಮನಸ್ಸುಗಳ ಜೊತೆ ನಾನಿರುವುದಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…