ಉಡುಪಿ : ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಗಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು.
ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ರಾಜ್ಯ ಸರ್ಕಾರ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ನೇಹಾ ಹೀರೆಮಠ ಪರವಾಗಿ ನ್ಯಾಯಕ್ಕಾಗಿ ರಾಜ್ಯಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಸಾಮಾನ್ಯ ವಿದ್ಯಾರ್ಥಿಗಳು ಬೀದಿಗಿಳದು ಪ್ರತಿಭಟಿಸಿದ್ದಾರೆ. ಆದರೆ ಕಾರ್ಕಳದಲ್ಲಿ ನಡೆದ ಪ್ರತಿಭಟನೆ ವಿರುದ್ಧ ಸರ್ಕಾರ FIR ದಾಖಲಿಸಿ ವಿದ್ಯಾರ್ಥಿಗಳ ಧ್ವನಿಯನ್ನು ಕುಗ್ಗಿಸುವ ಪ್ರಯತ್ನ ಮಾಡಿದ ಸರ್ಕಾರದ ನಡೆಯನ್ನು ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ.
ದಿನಾಂಕ 19-04-2024 ಶುಕ್ರವಾರ ಸಾಯಂಕಾಲ ಎಬಿವಿಪಿಯ ಕಾರ್ಕಳ ಶಾಖೆ ವತಿಯಿಂದ ಸರ್ವಜ್ಞ ವೃತ್ತದಿಂದ ಬಂಡೀಮಠದವರೆಗೆ ಪಂಜಿನ ಮೆರವಣಿಗೆ ಮೂಲಕ ಶಾಂತಿಯುತ ಪ್ರತಿಭಟನೆಯನ್ನು ನಡೆಸಲಾಗಿತ್ತು. ಇದರ ವಿರುದ್ಧ 3 ಎಬಿವಿಪಿ ಕಾರ್ಯಕರ್ತರ ಮೇಲೆ ಪೋಲೀಸ್ ಇಲಾಖೆ FIR ದಾಖಲಿಸಿರುವುದು ಖಂಡನಾರ್ಹ ಮತ್ತು ಸಮಾಜಕ್ಕೆ ಇಲಾಖೆಯ ಮೇಲೆ ತಪ್ಪು ಸಂದೇಶವನ್ನು ಕೊಡುವಂತಹದು ಆಗಿದೆ. ಆದ್ದರಿಂದ ಇಲಾಖೆ ಈ ಕೂಡಲೇ ಈ ವಿಚಾರವನ್ನು ಮರು ಪರಿಶೀಲಿಸಿ FIR ಅನ್ನು ವಜಾಗೊಳಿಸಬೇಕಾಗಿ ಎಬಿವಿಪಿ ಆಗ್ರಹಿಸುತ್ತದೆ. ತಪ್ಪಿದ್ದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಈ ಮೂಲಕ ಎಚ್ಚರಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕರ್ತರು ತಿಳಿಸಿದರು.
ಈ ಸಂಧರ್ಭದಲ್ಲಿ ಪ್ರಮುಖರಾದ ಶ್ರೀವತ್ಸ,ಹರ್ಷಿತ್ ಕೊಯ್ಲ,ಗಣೇಶ್ ಪೂಜಾರಿ,ಕುಮಾರಿ ಸಂಹಿತ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…