ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ 12,00 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನವೆಂಬರ್ 11 ಶುಕ್ರವಾರಬೆಳಿಗ್ಗೆ 10.30ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು , ಸಮಾರಂಭವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‍ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ| ಭಾಸ್ಕರ್ ಶೆಟ್ಟಿ ಎಸ್., ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…