Featured

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಉಡುಪಿ: ನ.14ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ನ. 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಕುರಿತು‌ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ತಾಹದ ಅವಧಿಯಲ್ಲಿ ಪ್ರತಿಯೊಂದು ಸಹಕಾರ ಸಂಘದ ಕಚೇರಿಯ ಆವರಣದಲ್ಲಿ ಏಳು ಬಣ್ಣಗಳ ಸಹಕಾರ ಧ್ವಜವನ್ನು ಹಾರಿಸಲಾಗುವುದು ಮತ್ತು ಸಹಕಾರ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಸಹಕಾರ ಪ್ರಚಾರ ರಥವನ್ನು 7 ದಿನಗಳ ಕಾಲ ಸಹಕಾರ ಸಪ್ತಾಹ ನಡೆಯುವ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ ಎಂದರು.

ನ.14ರಂದು ಬೆಳಿಗ್ಗೆ 10.30ಕ್ಕೆ ಮಂದಾರ್ತಿಯ ಶ್ರೀದುರ್ಗಾ ಸಹಕಾರ ಸೌಧದ ಶ್ರೀ ಚಾಮುಂಡೇಶ್ವರಿ ಸಭಾಂಗಣದಲ್ಲಿ‌ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಕಾರ್ಯಕ್ರಮಕ್ಕೂ ಮೊದಲು ಒಂದು ವಾರ ಜಿಲ್ಲೆಯಾದ್ಯಂತ ಸಂಚರಿಸುವ ಸಹಕಾರ ರಥಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನ.15ರಂದು ಮಧ್ಯಾಹ್ನ‌ 3ಗಂಟೆಗೆ ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ “ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ: ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ” ಎಂಬ ವಿಷಯದೊಂದಿಗೆ ಎರಡನೇ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನ.16ರಂದು ಬೆಳಿಗ್ಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಎಂಬ ವಿಷಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಅಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದರು.

ನ.17ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯ ವೈ ಲಕ್ಷ್ಮಣ ಸಭಾಂಗಣದಲ್ಲಿ ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳ ರಚನಾತ್ಮಕ ಮಾರ್ಗಸೂಚಿ’ ಎಂಬ ವಿಷಯದೊಂದಿಗೆ ನಾಲ್ಕನೇ ದಿನದ ಕಾರ್ಯಕ್ರಮ ಜರುಗಲಿದೆ. ನ.18ರಂದು ಮಧ್ಯಾಹ್ನ 3ಗಂಟೆಗೆ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಮೃದ್ಧಿ ಸಹಕಾರ ಸೌಧದಲ್ಲಿ ‘ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ಎಂಬ ವಿಷಯದೊಂದಿಗೆ ಐದನೇ ದಿನದ ಕಾರ್ಯಕ್ರಮ ನಡೆಯಲಿದೆ. ನ.19ರಂದು ಬೆಳಿಗ್ಗೆ 10.30ಕ್ಕೆ ಹೆಬ್ರಿಯ ಬಂಟರ ಭವನದಲ್ಲಿ ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಫ್ಲಾಟ್ ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ” ಎಂಬ ವಿಷಯದೊಂದಿಗೆ ಆರನೇ ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೇ ನ. 20ರಂದು ಬೆಳಿಗ್ಗೆ 10.30ಕ್ಕೆ ನಾಗೂರು ಒಡೆಯರಮಠ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ” ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ಎಂಬ ವಿಷಯದೊಂದಿಗೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಹಕಾರ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ವೈ ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನುಷಾ ಕೋಟ್ಯಾನ್, ಮ್ಯಾನೇಜರ್ ವಿಶ್ವನಾಥ್ ಇದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 hours ago