Featured

ಉಡುಪಿ: ನ.14ರಿಂದ 20ರವರೆಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ- ಬಿ. ಜಯಕರ ಶೆಟ್ಟಿ ಇಂದ್ರಾಳಿ – vishwanews24

ಉಡುಪಿ: ನ.14ರಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ- ಬಿ. ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ಬರುವ ನ.14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 70ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ‘5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು’ ಎಂಬ ಧ್ಯೇಯವಾಕ್ಯದೊಂದಿಗೆ ಸಪ್ತಾಹವನ್ನು ಆಚರಿಸಲಾಗುತ್ತಿದೆ.

70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭವು ಉಡುಪಿ ಮದರ್ ಸೊರೋಸ್ ಚರ್ಚ್ ಬಳಿಯ ಲಿಕೋ ಬ್ಯಾಂಕ್ ಗೋಲ್ಡನ್ ಜ್ಯುಬಿಲಿ ಸಭಾಂಗಣದಲ್ಲಿ ನ.14ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ ಎಲ್ ಐಸಿ ಎಂಪ್ಲಾಯೀಸ್ ಕೋ ಆ.ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣ, ಉಡುಪಿ ಟೀಚರ್ಸ್ ಕೋ ಆ.ಬ್ಯಾಂಕ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಪ್ರಭಾರ ಉಪನಿಬಂಧಕ ರಮೇಶ್ ಎಚ್.ಎನ್, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡುಬಿದಿರೆ ದವಳಾ ಕಾಲೇಜಿನ ಉಪನ್ಯಾಸಕ ಸಂತೋಷ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ನ.15ರಂದು ಸಹಕಾರ ಸಪ್ತಾಹ ಕಾರ್ಯಕ್ರಮವು ಕೋಟ ವ್ಯವಸಾಯ ಸೇವಾ ಸಹಕಾರ ಸಂಘಗಳ ಸಹಯೋಗದೊಂದಿಗೆ ‘ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ’ ಎಂಬ ವಿಷಯದೊಂದಿಗೆ ಕೋಟ ಬಿ.ಸಿ ಹೊಳ್ಳ ಸಭಾಭವನದಲ್ಲಿ ಮಧ್ಯಾಹ್ನ 12ಗಂಟೆಗೆ ನಡೆಯಲಿದೆ.

ನ.16ರಂದು ‘ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣ ಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ’ ವಿಷಯದೊಂದಿಗೆ ಕಾರ್ಕಳ ಲ್ಯಾಂಪ್ಸ್ ಸಭಾಂಗಣದಲ್ಲಿ ಮಧ್ಯಾಹ್ನ 3ಗಂಟೆಗೆ ಸಪ್ತಾಹ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ನ. 17ರಂದು ಉಡುಪಿ ತಾಲೂಕು ಇಂಡಸ್ಟ್ರೀಯಲ್ ಕೋ ಆಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು’ ಎಂಬ ವಿಷಯದೊಂದಿಗೆ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ಪೌರಾಯುಕ್ತ ರಾಯಪ್ಪ ಉದ್ಘಾಟಿಸಲಿದ್ದಾರೆ.

ನ.19ರಂದು ‘ಮಹಿಳೆಯರು, ಯುವಜನ ಮತ್ತು ಅಬಲವರ್ಗಕ್ಕೆ ಸಹಕಾರ ಸಂಸ್ಥೆಗಳು’ ಎಂಬ ವಿಷಯದೊಂದಿಗೆ ಕೋಟೇಶ್ವರ ಕಮಲಮ್ಮ ಸರ್ವೋತ್ತಮ ಬುದ್ಧ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9.30ಕ್ಕೆ ನಡೆದರೆ, ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವು ‘ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ’ ವಿಷಯದೊಂದಿಗೆ

ನ.20ರಂದು 10.30ಕ್ಕೆ ಪಡುಬಿದ್ರಿಯ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಜರುಗಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಶಂಕರ ಪೂಜಾರಿ ಕಟಪಾಡಿ, ಮನೋಜ್ ಕರ್ಕೇರ, ಯೂನಿಯನ್ ನ ಸಿಇಒ ಹಾಲಪ್ಪ ಕೋಡಿಹಳ್ಳಿ ಮತ್ತು ವಿಶ್ವನಾಥ್, ಅರುಣ್ ಇದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago