Featured

ಉಡುಪಿ:  ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ:  ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ ೨೦೪೦ ರೂ. ಮತ್ತು ಗ್ರೇಡ್ ಎ ಭತ್ತಕ್ಕೆ ೨೦೬೦ ರೂ. ಕನಿಷ್ಠ ಬೆಂಬಲ ಬೆಲೆ ನಿಗಧಿಪಡಿಸಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ೪ ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ಸ್ಥಳೀಯ ತಳಿಗಳ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ ೫೦೦ ರೂ. ಪ್ರೋತ್ಸಾಹಧನ ನೀಡಲು ಆದೇಶಿಸಿದ್ದು, ಪ್ರತಿ ಕ್ವಿಂ. ಭತ್ತಕ್ಕೆ ಒಟ್ಟು ೨೫೪೦ ರೂ. ನಿಗಧಿಪಡಿಸಲಾಗಿರುತ್ತದೆ.

ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಪತಿಯಿಂದ ಚಿತ್ರಹಿಂಸೆ.. 🚨 ಪೊಲೀಸ್ ಮೊರೆಹೋದ ಮಹಿಳೆ..

ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೧೬ ಕ್ವಿಂ. ನಂತೆ ಪ್ರತಿ ರೈತರಿಂದ ಗರಿಷ್ಠ ೪೦ ಕ್ವಿಂ. ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದ್ದು, ನವೆಂಬರ್ ೨೧ ರಿಂದ ಒಂದು ತಿಂಗಳು ರೈತರ ನೋಂದಣಿ ಕಾರ್ಯವನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕೃಷಿ ಮಾರುಕಟ್ಟೆ ಸಮಿತಿಯ ಎ.ಪಿ.ಎಂ.ಸಿ ಯಾರ್ಡ್ಗಳಲ್ಲಿ, ಕಾಪು, ಬ್ರಹ್ಮಾವರ, ಕೋಟ, ಬೈಂದೂರು ಹಾಗೂ ಅಜೆಕಾರು ರೈತ ಸಂಪರ್ಕ ಕೇಂದ್ರಗಳಲ್ಲಿ, ಕುಂದಾಪುರ ತಾಲೂಕು ವಂಡ್ಸೆ ವಿ.ಎಸ್.ಎಸ್.ಎನ್ ಹಾಗೂ ಹೆಬ್ರಿ ತಾಲೂಕು ಕಚೇರಿಯಲ್ಲಿ ಕೈಗೊಳ್ಳಲಿದ್ದು, ಡಿಸೆಂಬರ್ ೧ ರಿಂದ ೨೦೨೩ ಫೆಬ್ರವರಿ ೨೮ ರ ವರೆಗೆ ಭತ್ತ ಖರೀದಿ ಕಾರ್ಯ ನಡೆಯಲಿದೆ.

ಜಿಲ್ಲೆಯ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡೆಗೊಂಡು ಮತ್ತು ಸೇರ್ಪಡೆಗೊಂಡಿರುವ ಬಗ್ಗೆ ಫ್ರೂಟ್ಸ್ ತಂತ್ರಾAಶದ ಗುರುತಿನ ಸಂಖ್ಯೆಯೊAದಿಗೆ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೋಂದಣಿ ಕೇಂದ್ರದಲ್ಲಿ ನೋಂದಾಯಿಕೊಳ್ಳಬಹುದಾಗಿದೆ.
ಕೃಷಿ ಇಲಾಖೆಯ ಗುಣಮಟ್ಟ ಪರಿವೀಕ್ಷಕರು ಸರ್ಕಾರ ನಿಗಧಿಪಡಿಸಿರುವ ಮಾನದಂಡದ0ತೆ ಎಫ್‌ಎಕ್ಯೂ ಗುಣಮಟ್ಟ ಹೊಂದಿರುವ ಭತ್ತವನ್ನು ಪರಿಶೀಲಿಸಿ, ಖರೀದಿಸಲು ಕ್ರಮ ಕೈಗೊಳ್ಳಲಿದ್ದು, ರೈತರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 1700 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ – Vishwanews24

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago