ಉಡುಪಿ: ನ. 23ರಂದು ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ – vishwanews24

Featured, ಉಡುಪಿ

ನ.23ರಂದು ಉಡುಪಿಯಲ್ಲಿ ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ

ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶನದಂತೆ ಯುವಜನಸೇವಾ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನ.23ರಂದು ಬೆಳಿಗ್ಗೆ 9.30ಕ್ಕೆ ಅಸ್ಮಿತಾ ಯುವತಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕ್ರೀಡಾಕೂಟದಲ್ಲಿ 14 ಹಾಗೂ 16ರ ವಯೋಮಿತಿಯೊಳಗಿನ ಯುವತಿಯರು ಭಾಗವಹಿಸಬಹುದು. ನ.22ರೊಳಗೆ ನೋಂದಣಿ ಮಾಡಬಹುದು. ಯಾವುದೇ ನೋಂದಣಿ ಶುಲ್ಕ ಇಲ್ಲ. ಎತ್ತರ ಜಿಗಿತ, ಉದ್ದಜಿಗಿತ, ಬ್ಯಾಕ್ ಥ್ರೋ, ಜಾವೆಲಿನ್ ಥ್ರೋ, ಶಾಟ್‌ಪುಟ್ ಸ್ಪರ್ಧೆಗಳು ನಡೆಯಲಿದೆ ಎಂದರು.

ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಶಾಸಕ ಲಕ್ಷ್ಮಣ ಸವದಿ – vishwanews24

ರಾಜ್ಯದ 18 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ವೀಕ್ಷಕರು ನ.22ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ಇಬ್ಬರು ಅರ್ಹ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ. ವಿಜೇತರಿಗೆ ಪ್ರಮಾಣಪತ್ರ ಹಾಗೂ ಪದಕವನ್ನು ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದವರು ನೀಡಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ತಾಂತ್ರಿಕ ಸಮಿತಿ ಮುಖ್ಯಸ್ಥ ಡಾ. ರಾಮಚಂದ್ರ ಪಾಟ್ಕರ್, ಸದಸ್ಯ ಲಚ್ಚೇಂದ್ರ, ಜತೆ ಕಾರ್ಯದರ್ಶಿ ಸುದರ್ಶನ ನಾಯಕ್, ಅಂತರಾಷ್ಟ್ರೀಯ ಕ್ರೀಡಾಪಟು ಬಾಬುಶೆಟ್ಟಿ ಇದ್ದರು.

ಮಲ್ಪೆ ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯ ಸೋರಿಕೆ : ಇಬ್ಬರ ಬಂಧನ – vishwanews24

Leave a Reply