ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶನದಂತೆ ಯುವಜನಸೇವಾ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನ.23ರಂದು ಬೆಳಿಗ್ಗೆ 9.30ಕ್ಕೆ ಅಸ್ಮಿತಾ ಯುವತಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕ್ರೀಡಾಕೂಟದಲ್ಲಿ 14 ಹಾಗೂ 16ರ ವಯೋಮಿತಿಯೊಳಗಿನ ಯುವತಿಯರು ಭಾಗವಹಿಸಬಹುದು. ನ.22ರೊಳಗೆ ನೋಂದಣಿ ಮಾಡಬಹುದು. ಯಾವುದೇ ನೋಂದಣಿ ಶುಲ್ಕ ಇಲ್ಲ. ಎತ್ತರ ಜಿಗಿತ, ಉದ್ದಜಿಗಿತ, ಬ್ಯಾಕ್ ಥ್ರೋ, ಜಾವೆಲಿನ್ ಥ್ರೋ, ಶಾಟ್‌ಪುಟ್ ಸ್ಪರ್ಧೆಗಳು ನಡೆಯಲಿದೆ ಎಂದರು.
ರಾಜ್ಯದ 18 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ವೀಕ್ಷಕರು ನ.22ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ಇಬ್ಬರು ಅರ್ಹ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ. ವಿಜೇತರಿಗೆ ಪ್ರಮಾಣಪತ್ರ ಹಾಗೂ ಪದಕವನ್ನು ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದವರು ನೀಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ತಾಂತ್ರಿಕ ಸಮಿತಿ ಮುಖ್ಯಸ್ಥ ಡಾ. ರಾಮಚಂದ್ರ ಪಾಟ್ಕರ್, ಸದಸ್ಯ ಲಚ್ಚೇಂದ್ರ, ಜತೆ ಕಾರ್ಯದರ್ಶಿ ಸುದರ್ಶನ ನಾಯಕ್, ಅಂತರಾಷ್ಟ್ರೀಯ ಕ್ರೀಡಾಪಟು ಬಾಬುಶೆಟ್ಟಿ ಇದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…