Featured

ಉಡುಪಿ: ನ.23ರಿಂದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ – vishwanews24

ನ.23ರಿಂದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ

ಉಡುಪಿ: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾದ ರಂಗಭೂಮಿ ಉಡುಪಿ ಸಂಸ್ಥೆ ಆಯೋಜಿಸುವ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ. 23ರಂದು ಸಂಜೆ 5ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ. ಕೆ. ವಿ. ನಾಗರಾಜ ಮೂರ್ತಿ, ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಶನ್ ಅಧ್ಯಕ್ಷ  ರಂಜನ್, ಉದ್ಯಮಿಗಳಾದ ಸತ್ಯಾನಂದ ನಾಯಕ್ ಹಾಗೂ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಡಾ. ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಭಾಕಾರ್ಯಕ್ರಮಕ್ಕೂ ಮೊದಲು ಸಂಜೆ 4ಗಂಟೆಗೆ ರಂಗಭೂಮಿಯ ಕಲಾವಿದರಿಂದ ಗೀತಂ ಗಿರೀಶ್ ನೇತೃತ್ವದಲ್ಲಿ ‘ಸಂಗೀತ ಸೌರಭ’ ಕಾರ್ಯಕ್ರಮ ನಡೆಯಲಿದೆ. ಈ ನಾಟಕ ಸ್ಪರ್ಧೆಯಲ್ಲಿ ಒಟ್ಟು 12 ನಾಟಕ ತಂಡಗಳು ಭಾಗವಹಿಸುತ್ತಿದ್ದು, ಬೆಂಗಳೂರಿನ 6, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ತಲಾ 2, ತುಮಕೂರು ಮತ್ತು ಮೈಸೂರು ಜಿಲ್ಲೆಯ ತಲಾ 1 ತಂಡಗಳು ಭಾಗವಹಿಸಲಿವೆ. ನ. 23ರಿಂದ ಡಿ. 4ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.

ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 35 ಸಾವಿರ, ದ್ವಿತೀಯ 25 ಸಾವಿರ ಹಾಗೂ ತೃತೀಯ 15 ಸಾವಿರ ನಗದು ಬಹುಮಾನ ಹಾಗೂ ಶಾಶ್ವತ ಫಲಕ ನೀಡಲಾಗುವುದು. ಅಲ್ಲದೆ, ಶ್ರೇಷ್ಠ ನಿರ್ದೇಶನ, ನಟ, ನಟಿ, ಪ್ರಸಾದನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ, ಶಿಸ್ತಿನ ತಂಡ ಈ ಎಲ್ಲಾ ವಿಭಾಗಗಳಿಗೆ ನಗದು ಸಹಿತ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಂಗಭೂಮಿಯ ಉಪಾಧ್ಯಕ್ಷ ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಚಂದ್ರ ಕುತ್ಪಾಡಿ, ಜೊತೆ ಕಾರ್ಯದರ್ಶಿ ವಿವೇಕಾನಂದ ಎನ್. ಹಾಗೂ ಕೋಶಾಧಿಕಾರಿ ಯು. ಭೋಜ ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

4 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

4 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

4 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

5 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

5 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

6 hours ago