Featured

ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ – vishwanews24

ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ, 2025ನೇ ಸಾಲಿನ ಡೈರಿ ಬಿಡುಗಡೆ ಹಾಗೂ ವಿಧಾನಪರಿಷತ್ ನೂತನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಈ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಖಂಬದಕೋಣೆ ರೈತರ ಸೇವಾ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ನಾರಾಯಣ ಬಲ್ಲಾಳ್, ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ಉದಯ ಹಟ್ಟಿಯಂಗಡಿ ರವರಿಗೆ ಅಭಿನಂದನಾ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನವೆಂಬರ್ 23 ಶನಿವಾರ ಮಧ್ಯಾಹ್ನ 3.00ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭವನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ| ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರವನ್ನು ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕರಾದ ಆನಂದ ಸಿ. ಕುಂದರ್ ವಿತರಿಸಲಿದ್ದು, ಬ್ಯಾಂಕಿನ 2025ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ನಿರ್ದೇಶಕರಾದ ಶ್ಯಾಮಿಲಿ ನವೀನ್ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ, ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago