Featured

ಉಡುಪಿ : ನ. 24ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಅಶೋಕ್ ಕೊಡವೂರು -vishwanews24

ಉಡುಪಿ : ನ. 24ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಅಶೋಕ್ ಕೊಡವೂರು

ಉಡುಪಿ : ಜಿಲ್ಲೆಯಲ್ಲಿ ಮುಂದಿನ ನವೆಂಬರ್ 24 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲು ತೀರ್ಮಾನಿಸಿದ್ದು, ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಸಮಾವೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಗ್ಯಾರಂಟಿ ಫಲಾನುಭವಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸಮಿತಿ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಮಣಿಪಾಲ ರಜತಾದ್ರಿ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಅದನ್ನು ಗಂಭೀರವಾಗಿ ಪರಿಗಣಿಸಿ ಬಗೆಹರಿಸಬೇಕು. ಗ್ಯಾರಂಟಿ ಯೋಜನೆಯಿಂದ ಅರ್ಹರು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ರಾಜ್ಯದ ಜನಸಾಮಾನ್ಯರ ಜೀವನಮಟ್ಟ ಸುಧಾರಣೆಗೆ ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಹಕಾರವಾಗಿವೆ. ಈ ಯೋಜನೆಗಳು ಜಾರಿಗೆ ಬಂದ ಬಳಿಕ ಸಾವಿರಾರು ಕುಟುಂಬಗಳಿಗೆ ಅನುಕೂಲ ವಾಗಿದೆ ಎಂದವರು ನುಡಿದರು.

ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಯೋಜನೆಯ ಸೌಲಭ್ಯ ದೊರಕುವಂತೆ ಮಾಡಬೇಕಾಗಿದೆ. ಪಡುಬಿದ್ರೆ-ನಿಟ್ಟೆ ಹಾಗೂ ಪಳ್ಳಿ-ಬೆಳ್ವೆ ಮಾರ್ಗದ ಸಾರಿಗೆಗಳು ಸಮಯ ಬದಲಾವಣೆ ಮಾಡಿಕೊಂಡು ಕಾರ್ಯಾಚರಿ ಸುವಂತೆ ಕಳೆದ ಸಭೆಗಳಲ್ಲಿ ಸೂಚಿಸಿದ್ದರೂ ಸಹ ಇದುವರೆಗೂ ಈ ಮಾರ್ಗಗಳಲ್ಲಿ ಸಾರಿಗೆ ಬಸ್‌ಗಳು ಸಂಚರಿಸು ತ್ತಿಲ್ಲ. ಈ ಬಗ್ಗೆ ಆರ್‌ಟಿಓ ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಂಡು, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಬೈಂದೂರು ವ್ಯಾಪ್ತಿಯಲ್ಲಿ ನಿಗಮದ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಪ್ರವೇಶಿಸದೇ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬಸ್‌ಗಳನ್ನು ನಿಲ್ಲಿಸಿ, ಸಾರ್ವಜನಿಕರನ್ನು ಇಳಿಸಿ ಹೋಗುತ್ತಿರುವುದರಿಂದ ಬಸ್ ನಿಲ್ದಾಣಗಳಲ್ಲಿ ಬಸ್‌ ಗಳಿಗಾಗಿ ಕಾಯುತ್ತಿರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಕೋಟ್ಯಾಂತರ ರೂ. ಖರ್ಚು ಮಾಡಿ, ಪ್ರಯಾಣಿಕರ ಸೌಲಭ್ಯಕ್ಕಾಗಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದ್ದು, ನಿಗಮದ ಎಲ್ಲಾ ಬಸ್‌ಗಳು ಬಸ್ ನಿಲ್ದಾಣವನ್ನು ಪ್ರವೇಶಿಸಿ, ವರದಿ ಮಾಡಿಕೊಂಡು, ಪ್ರಯಾಣಿಕರನ್ನು ಹತ್ತಿಸಿಕೊಂಡು ನಂತರ ಮುಂದಕ್ಕೆ ಪ್ರಯಾಣ ಬೆಳೆಸಬೇಕು ಎಂದವರು ಸೂಚಿಸಿದರು.

ಅಲ್ಲದೇ ಗ್ಯಾರಂಟಿ ಯೋಜನೆಗಳ ಬಗ್ಗೆ ಬಸ್‌ಗಳ ಚಾಲಕರು, ನಿರ್ವಾಹಕರು ತಪ್ಪು ಮಾಹಿತಿಯನ್ನು ಸಾರ್ವಜನಿಕ ರಿಗೆ ನೀಡದಂತೆ ನಿಗಮದ ವ್ಯವಸ್ಥಾಪಕರು ಸೂಚನೆ ನೀಡಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬ ಪಡಿತರ ಚೀಟಿದಾರರು ಇ-ಕೆವೈಸಿಯನ್ನು ತಪ್ಪದೇ ಮಾಡಿಸಬೇಕು. ಈಗಾಗಲೇ ಸುಮಾರು ಶೇ. 84 ರಷ್ಟು ಇ-ಕೆವೈಸಿ ಕಾರ್ಯಗಳು ಪೂರ್ಣಗೊಂಡಿದ್ದು, ಸಾರ್ವಜನಿಕರು ಸ್ವಯಂ ಆಗಿಯೂ ಕೂಡ ಅನ್ನಸೇವೆ ಮೊಬೈಲ್ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 3,32,021 ಜನರು ನೋಂದಣಿಯಾಗಿದ್ದು, 10,667 ಕುಟುಂಬಗಳು ಸರ್ವೇ ಕಾರ್ಯ ಬಾಕಿ ಇದ್ದು, ಇದನ್ನು ಅಕ್ಟೋಬರ್ 31ರ ಒಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 2,13,236 ಮಹಿಳೆಯರಿಗೆ ಪ್ರತೀ ತಿಂಗಳು ಎರಡು ಸಾವಿರ ರೂಗಳನ್ನು ನೀಡಲಾಗುತ್ತಿದ್ದು, ಈವರೆಗೆ 1451.36 ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸ ಲಾಗಿದೆ. ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಯ ಒಟ್ಟು 8,24,049 ಫಲಾನುಭವಿಗಳಿದ್ದು, ಪ್ರತಿಯೊಬ್ಬರಿಗೂ 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಇದುವರೆಗೆೆ 427.36 ಕೋಟಿ ರೂ. ಪಾವತಿಸಲಾಗಿದೆ ಹಾಗೂ ಯುವನಿಧಿ ಯೋಜನೆಯಡಿ 5401 ಅಭ್ಯರ್ಥಿಗಳು ನೋಂದಣಿಯಾಗಿದ್ದು, 5016 ಫಲಾನುಭವಿಗಳಿಗೆ 13.67 ಕೋಟಿ ರೂ. ನೇರ ನಗದನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸತೀಶ್ ಹಾಗೂ ಸಂತೋಷ್ ಕುಲಾಲ್, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿಗಳ ಅಧ್ಯಕ್ಷರಾದ ಡಾ.ಸುನೀತಾ ಶೆಟ್ಟಿ, ನವೀನ್‌ಚಂದ್ರ ಅಡ್ವೆ, ಮೋಹನ್ ಪೂಜಾರಿ, ಅಜಿತ್ ಹೆಗ್ಡೆ ಹಾಗೂ ಶಂಕರ ಶೇರಿಗಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಮಟ್ಟದ ಸದಸ್ಯರುಗಳು ಉಪಸ್ಥಿತರಿದ್ದರು.

Vishwa News 24

Recent Posts

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ -vishwanews24

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿ…

51 minutes ago

ಕಾಪು : ಬೀಚ್‌ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ; ಇಬ್ಬರು ಆರೋಪಿಗಳ ಬಂಧನ -vishwanews24

ಕಾಪು:  ಬೀಚ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ – ಇಬ್ಬರ ಬಂಧನ, ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ವಶ…

1 hour ago

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ; ಆರೋಪಿ ಬಂಧನ -vishwanews24

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ; ಆರೋಪಿ ಬಂಧನ ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು  ರಾತ್ರಿ ಬ್ರಹ್ಮಾವರ…

2 hours ago

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿ ನಗರ ಬಿಜೆಪಿಯಿಂದ ಪಂಜಿನ ಮೆರವಣಿಗೆ -vishwanews24

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೆಸ್ಕಾಂ ವೈಫಲ್ಯ ಖಂಡಿಸಿ  ಬಿಜೆಪಿಯಿಂದ ಪಂಜಿನ ಮೆರವಣಿಗೆ: ದಿನೇಶ್ ಅಮೀನ್ ಉಡುಪಿ…

17 hours ago

ಉಡುಪಿ: ಖರ್ಗೆ ಹೇಳಿಕೆ ಕಾಂಗ್ರೆಸ್‌ನ ಅಧಃಪತನಕ್ಕೆನಾಂದಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ – vishwanews24

ಉಡುಪಿ: ಮೋದಿ ವಿರುದ್ಧ ಖರ್ಗೆ ಹೇಳಿಕೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಖಂಡನೆ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ ದೇಶವನ್ನು…

22 hours ago

ಬೆಳಗಾವಿ: ರಾಜಮನೆತನದ ಗೌರವ, ಸಂಪ್ರದಾಯಕ್ಕೆ ಚ್ಯುತಿ ತರುವ ಉದ್ದೇಶ ಸರ್ಕಾರಕ್ಕಿಲ್ಲ: ಡಿಕೆ ಶಿವಕುಮಾರ್ – vishwanews24

ಬೆಳಗಾವಿ: ರಾಜಮನೆತನದ ಗೌರವ, ಸಂಪ್ರದಾಯಕ್ಕೆ ಚ್ಯುತಿ ತರುವ ಉದ್ದೇಶ ಸರ್ಕಾರಕ್ಕಿಲ್ಲ: ಡಿಕೆ ಶಿವಕುಮಾರ್ ಬೆಳಗಾವಿ: ರಾಜಮನೆತನಕ್ಕೆನೀಡಬೇಕಾದ ಗೌರವ ಹಾಗೂ ಸಾಂಪ್ರದಾಯಿಕ…

22 hours ago