Featured

ಉಡುಪಿ: ನ. 28ರಂದು ಪ್ರಧಾನಿ ಮೋದಿ ಭೇಟಿ ; ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ – vishwanews24

ಉಡುಪಿ: ನ. 28ರಂದು ಪ್ರಧಾನಿ ಮೋದಿ ಭೇಟಿ ; ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಉಡುಪಿ, :ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ನೀಡುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸೂಚನೆ ನೀಡಿದ್ದಾರೆ.

ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ, ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಅಲ್ಲದೆ ಪ್ರಧಾನಿಗಳು ಸಂಚರಿಸುವ ಮಾರ್ಗದ ಇಕ್ಕೆಲಗಳ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚಿಸಲಾಗಿದೆ.

ನವೆಂಬರ್ 28 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಂಗಡಿ ಮುಚ್ಚುವಂತೆ ಡಿಸಿ ಸೂಚಿಸಿದ್ದಾರೆ. ಇನ್ನು ನವಂಬರ್ 26 ಬೆಳಿಗ್ಗೆ 6ಗಂಟೆಯಿಂದ ನವಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಉಳಿದಂತೆ ಪ್ರಧಾನಿಗಳ ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಹಲವು ಸೂಚನೆಗಳನ್ನು ಕೂಡ ನೀಡಲಾಗಿದೆ.

ಬ್ಯಾಗ್, ನೀರಿನ ಬಾಟಲ್, ಧ್ವಜ, ಸ್ಟಿಕರ್ಸ್, ಬಲೂನ್ಸ್ ,ಪಟಾಕಿ, ಲೂಸ್ ಪಾಲಿಥಿನ್ ತರುವುದು ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago