ಉಡುಪಿಯ ಕಲ್ಮಂಜೆ ಟವರ್ಸ್ನ ದ್ವಿತೀಯ ಮಹಡಿಯ ಸ್ವಂತ ಕಟ್ಟಡದಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ನೂತನ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 7 ರಂದು ಪೂರ್ವಾಹ್ನ 9 ಗಂಟೆಗೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಪೇಜಾವರ ಅಧೋಕ್ಷಜ ಮಠದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆಯನ್ನು ನೆರವೇರಿಸಿ ಅಶೀರ್ವಚಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಭಾಗವಹಿಸಲಿದ್ದು, ಬ್ಯಾಂಕಿನ ಗ್ರಾಹಕರು, ವಿವಿಧ ಗಣ್ಯರುಉಪಸ್ಥಿತರಿರಲಿದ್ದಾರೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕಳೆದ ೪೫ ವರ್ಷಗಳಿಂದ ಗ್ರಾಹಕ ಸ್ನೇಹಿ ಬ್ಯಾಂಕಿAಗ್ ಸೇವೆ ಹಾಗೂ ನಿರಂತರ ಆರ್ಥಿಕ ಪ್ರಗತಿಯೊಂದಿಗೆ ಲಾಭದಾಯಕ ಸಹಕಾರಿ ಸಂಸ್ಥೆಯಾಗಿ ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ೮ ಶಾಖೆಗಳ ಮೂಲಕ ಆಧುನಿಕ ಬ್ಯಾಂಕಿAಗ್ ಸೌಲಭ್ಯಗಳೊಂದಿಗೆ ವ್ಯವಹಾರ ನಡೆಸುತ್ತಿರುವ ಬ್ಯಾಂಕಿನ ಆಡಳಿತಾತ್ಮಕ ಚಟುವಟಿಕೆಗೆ ಪೂರಕವಾಗಿ ಉಡುಪಿಯ ಹೃದಯ ಭಾಗದಲ್ಲಿರುವ ಆಡಳಿತ ಕಚೇರಿಯನ್ನು ವಿಸ್ತರಿಸುವ ಮೂಲಕ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ವೇಗ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮ್ಯಾಂಗಲೋರ್ ಅಲ್ಲ ಇನ್ನು ಮುಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…