Featured

ಉಡುಪಿ : ಪಂಚರಾಜ್ಯ ಚುನಾವಣೆ – ಮತದಾರರು ನೀಡಿದ ಫಲಿತಾಂಶಕ್ಕೆ ತಲೆಬಾಗುತ್ತೇವೆ : ಮಂಜುನಾಥ ಭಂಡಾರಿ – vishwanews24

ಉಡುಪಿ : ಪಂಚರಾಜ್ಯ ಚುನಾವಣೆ – ಮತದಾರರು ನೀಡಿದ ಫಲಿತಾಂಶಕ್ಕೆ ತಲೆಬಾಗುತ್ತೇವೆ : ಮಂಜುನಾಥ ಭಂಡಾರಿ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಧಾನ. ತೆಲಂಗಾಣದ ಮತದಾರರಿಗೆ ವ್ಯಯಕ್ತಿಕ ಅಭಿನಂದನೆಗಳನ್ನು ಸಲ್ಲಿಸುತ್ತಾ ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿದ ಪ್ರತಿಯೊರ್ವ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.

ಚುನಾವಣಾ ವ್ಯವಸ್ಥೆಯಲ್ಲಿ ಸೋಲು-ಗೆಲವು ಕ್ಷಣಿಕ . ಗೆದ್ದಾಗ ಹಿಗ್ಗದೇ ಸೋತಾಗ ಕಿಗ್ಗದೇ ರಾಜಕೀಯ ಮಾಡುತ್ತಾ ಬಂದಿರುವ ಪಕ್ಷ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ . ಕರ್ನಾಟಕ ರಾಜ್ಯದಲ್ಲಿ ಬಡವರ್ಗದ ಹಾಗೂ ದಲಿತರ ಪರವಾಗಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನು ಚುನಾವಣೆಯಲ್ಲಿ ಗೆದ್ದ 100 ದಿನಗಳಲ್ಲಿ ಅನುಷ್ಟಾನಕ್ಕೆ ತಂದಿರುವುದು ಇತಿಹಾಸದ ಪುಟಗಳಲ್ಲಿ ಅಚ್ಚಳಿಯದ ಉಳಿಯುವ ವ್ಯವಸ್ಥೆಯಾಗಿದ್ದನ್ನು ಮನಗಂಡ ರಾಷ್ಟ್ರ ಬಿಜೆಪಿ ಮದ್ಯ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ನಮ್ಮ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಯ ಹೆಸರನ್ನು ಬದಲಾಯಿಸಿದವರೇ ಲಾಡ್ಲಿ ಬೆಹ್ನಾ ಹೆಸರಿನಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಗೆಲುವು ದಾಖಲಿಸಲೆಂಬ ಎಕಮಾತೃ ದೃಷ್ಟಿಯಿಂದ ನಮ್ಮ ಗ್ಯಾರಂಟಿಗಳ ಹೆಸರು ಬದಲಾಯಿಸುವಷ್ಟು ಮಟ್ಟಕ್ಕೆ ಕರ್ನಾಟಕ ಕಾಂಗ್ರೆಸ್ ನ ಗ್ಯಾರಂಟಿಗಳು ಕಾರಣವಾದವು ಎಂದರೆ ತಪ್ಪಾಗಲಾರದು.

ರಾಜ್ಯ ಕಾಂಗ್ರೆಸ್, ನ ಗ್ಯಾರಂಟಿ ಯೋಜನೆಗಳು ರಾಷ್ಟ್ರೀಯ ಬಿಜೆಪಿಯ ನಿದ್ದಿಗೆಡಿಸಿದ್ದಂತೂ ಸತ್ಯ… ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ನೀಡುವಾಗ ದೇಶ ದಿವಾಳಿಯಾಗುತ್ತೆ ಎಂದು ಟೀಕೆ ಮಾಡಿದ ಬಿಜೆಪಿ ಈಗ ಸ್ವತಃ ಮೋದಿ ಕಿ ಗ್ಯಾರಂಟಿ ಎನ್ನುವ ಹೆಸರಿನಲ್ಲಿ ನಮ್ಮ ಯೋಜನೆಗಳನ್ನು ಹೆಸರು ಬದಲಾವಣೆ ಮಾಡಿ ಚುನಾವಣೆಯಲ್ಲಿ ಪ್ರಯೋಗ ಮಾಡಿರುವುದು ಜಗಜ್ಕಾಹಿರಾಗಿದೆ. ಇನ್ನು ಮುಂದೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಯಾವುದೇ ನೈತಿಕತೆಯನ್ನು ಬಿಜೆಪಿ ಹೊಂದಿಲ್ಲ.

ಅದೇನೆ ಇರಲಿ ನಮ್ಮ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ಮಾಡಿ ನಮ್ಮಲ್ಲಿನ ನೂನ್ಯತೆಗಳನ್ನು ತಿದ್ದಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಯವರ ನೇತೃತ್ವದಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಹಿರಿಯ ಹಾಗೂ ಕಿರಿಯ ನಾಯಕರುಗಳ ಒಗ್ಗಟ್ಟು ಹಾಗೂ ಕೊಟ್ಯಾಂತರ ಕಾರ್ಯಕರ್ತರ ಒಕ್ಕೊರಲ ಶ್ರಮದಿಂದ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಅಧಿಕಾರಕ್ಕೆ ಏರುವ ವಿಶ್ವಾಸವನ್ನು ಮಾಧ್ಯಮ ಪ್ರಕಟಣೆಯಲ್ಲಿ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago