Featured

ಉಡುಪಿ : ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಷ್ಟಕಾರ್ಪಣ್ಯಗಳು ದೂರ : ಅಶೋಕ್ ಕೊಡವೂರು – vishwanews24

ಉಡುಪಿ : ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಷ್ಟಕಾರ್ಪಣ್ಯಗಳು ದೂರ : ಅಶೋಕ್ ಕೊಡವೂರು

      ಉಡುಪಿ: ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು

 ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು

 ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ ಕಳೆದ ಎರಡು ವರ್ಷಗಳ ಹಿಂದೆ ಜಾರಿಗೆ ತರುವುದರೊಂದಿಗೆ ನಿರಂತರವಾಗಿ ಯೋಜನೆಗಳನ್ನು ಜನಸಾಮಾನ್ಯರಿಗೆ ಎರಡು ವರ್ಷದಿಂದಲೂ ತಲುಪಿಸುತ್ತಿದೆ. ಬಾರಿಯ ಬಜೆಟ್ನಲ್ಲಿ 51,034 ಕೋಟಿ ರೂ. ಮೊತ್ತದ ಅನುದಾನವನ್ನು ಮೀಸಲಿಟ್ಟಿದೆ. ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವಂತೆ ಪ್ರತಿಯೊಂದು ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದರು

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳ ಕುರಿತು ದೂರುಗಳು ಬಂದಲ್ಲಿ ಕೂಡಲೇ ಅವುಗಳಿಗೆ ಸ್ಪಂದಿಸುವ ಕೆಲಸಗಳನ್ನು ಅಧಿಕಾರಿಗಳು ಆದ್ಯತೆಯ ಮೇಲೆ ಮಾಡಬೇಕು ಎಂದ ಅವರು, ಗೃಹಲಕ್ಷಿö್ಮÃ ಯೋಜನೆಯಡಿಯ ಕೆಲವು ಫಲಾನುಭವಿಗಳಿಗೆ ಪ್ರತೀ ತಿಂಗಳ 2000 ರೂ. ಹಣ ಬರುತ್ತಿದ್ದು, ಮಧ್ಯದಲ್ಲಿ ಒಂದೆರೆಡು ತಿಂಗಳ ಹಣ ಬಂದಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಇವುಗಳಿಗೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂದಿಸಬೇಕು ಎಂದರು

 ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಬಿಡಲಾಗಿತ್ತು. ಆದರೆ ಕೋವಿಡ್ ಸಂದರ್ಭದಲ್ಲಿ ಇವುಗಳ ಚಾಲನೆ ನಿಂತುಹೋಗಿದೆ. ಇದರಿಂದ ಶಾಲಾಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ತೊಂದರೆ ಉಂಟಾಗಿದೆ. ಆದಷ್ಟು ಶೀಘ್ರದಲ್ಲಿಯೇ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಮರು ಚಾಲನೆ ಮಾಡಿಕೊಡಬೇಕು ಎಂದರು.

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯು ಮಹಿಳಾ ಸಬಲೀಕರಣದಲ್ಲಿ ಮುಂಚೂಣಿಯಲ್ಲಿದೆ. ಪಂಚ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷಿö್ಮÃ ಯೋಜನೆಯು ಮಹಿಳೆಯರ ಸ್ವಾವಲಂಭಿ ಬದುಕಿಗೆ ದಾರಿಮಾಡಿಕೊಡುವ ಉದ್ದೇಶ ಹೊಂದಿದೆ. ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸೇರಿಕೊಂಡು ಸ್ವಸಹಾಯ ಗುಂಪುಗಳನ್ನು ಮಾಡಿಕೊಳ್ಳುವುದರೊಂದಿಗೆ ಸರಕಾರದ ವಿವಿಧ ಯೋಜನೆಗಳ ಸಹಕಾರದೊಂದಿಗೆ ಹೈನುಗಾರಿಕೆ, ಕುಕ್ಕುಟೋದ್ಯಮ ಸೇರಿದಂತೆ ಮತ್ತಿತರ ಸ್ವಉದ್ಯೋಗ ಹೊಂದಲು ಹಾಗೂ ಸಣ್ಣಪುಟ್ಟ ಸಿವಿಲ್ ವರ್ಕ್ಗಳನ್ನು ಸಹ ಮಾಡಲು ಮುಂದೆ ಬರಬೇಕು ಎಂದರು

 ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರ್ಲಾಡಿ ಗ್ರಾಮವು ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸುಮಾರು 250 ಕ್ಕೂ ಹೆಚ್ಚು ಮನೆಗಳಿದ್ದು, ನ್ಯಾಯಬೆಲೆ ಅಂಗಡಿಯಿಲ್ಲದೆ ಪಡಿತರ ಪಡೆಯಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಬ್ರಹ್ಮಾವರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರ ಸಭೆಯ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಇಂತಹ ಪ್ರದೇಶ ವ್ಯಾಪ್ತಿಯಲ್ಲಿ ಪಡಿತರ ಸಂಖ್ಯೆಯನ್ನು ಆಧರಿಸಿ, ನಿಯಮಾನುಸಾರ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮವಹಿಸಲಾಗುವುದು ಎಂದರು.

 ಇದೇ ಸಂದರ್ಭದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಕುರಿತ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

 ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯರುಗಳಾದ ಗೀತಾ ವಾಗ್ಳೆ, ಸಂತೋಷ್ ಕುಲಾಲ್ ಹಾಗೂ ಸತೀಶ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳಾದ ರಮೇಶ್ ಕಾಂಚನ್, ಡಾ.ಸುನೀತಾ ಶೆಟ್ಟಿ, ನವೀನ್ ಚಂದ್ರ ಅಡ್ಡ, ಹರಿಪ್ರಸಾದ್ ಶೆಟ್ಟಿ, ಅಜಿತ್ ಹೆಗ್ಡೆ, ಶಂಕರ್ ಶೇರಿಗಾರ್ ಹಾಗೂ ಮೋಹನ್ ಪೂಜಾರಿ ಉಪ್ಪುಂದ, ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago