Featured

ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್‌ಪಾಲ್ ಸುವರ್ಣ – Vishwanews24

ಉಡುಪಿ: ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ : ಯಶ್‌ಪಾಲ್ ಸುವರ್ಣ

ಉಡುಪಿ: “ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ನನಗೆ ಉಡುಪಿ ವಿದಾನಸಭಾ ಕ್ಷೇತ್ರದಿಂದ ಅವಕಾಶ ನೀಡಿದ್ದು, ಇದಕ್ಕಾಗಿ ಪಕ್ಷದ ಎಲ್ಲಾ ಹಿರಿಯರಿಗೆ ನನ್ನ ಕೃತಜ್ಞತೆಗಳು. ಪಕ್ಷದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಾನು ಕೆಲಸ ಮಾಡುತ್ತೇನೆ” ಎಂದು ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಟಿಕೆಟ್ ಘೋಷಣೆಯಾದ ಬಳಿಕ ಮಾಧ್ಯಮಕ್ಕೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.

ಕಾಪು ಕ್ಷೇತ್ರದ ಬದಲು ಬಿಜೆಪಿ ಉಡುಪಿಯಲ್ಲಿ ಟಿಕೆಟ್ ನೀಡಿದ್ದು, ಇದಕ್ಕೆ ಉತ್ತರಿಸಿದ ಅವರು ” ನಾನು ಯಾವುದೇ ಒಂದು ಕ್ಷೇತ್ರಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ.ದೇಶದ ಮೂಲೆ ಮೂಲೆಗಳಲ್ಲಿ ಪಕ್ಷಕ್ಕಾಗಿ ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ.ಪಕ್ಷ ನನಗೆ ಎಲ್ಲಿ ಕೆಲಸ ಮಾಡಬೇಕು ಎಂಬ ಸೂಚನೆ ನೀಡುತ್ತದೆ ಆ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ರಘುಪತಿ ಭಟ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಮನವೊಲಿಕೆ ಬಗ್ಗೆ ಮಾತನಾಡಿದ ಅವರು,ರಘುಪತಿ ಭಟ್ ನನ್ನ ಮಾರ್ಗದರ್ಶಕರು ನಗರಸಭೆ ಚುನಾವಣೆ ಸಂದರ್ಭದಲ್ಲಿ ಕೂಡಾ ನನ್ನ ಪರವಾಗಿ ಕೆಲಸ ಮಾಡಿದ್ದರು.ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಕೂಡಾ ನನಗೆ ಮಾರ್ಗದರ್ಶನ ಮಾಡಿದ್ದಾರೆ.ಅವರ ಸಲಹೆ ಸೂಚನೆ ಪಡೆದುಕೊಂಡು ನಾನು ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.

“ಮೊಗವೀರನಾದರೂ ಇವತ್ತು ನನ್ನನ್ನು ಅಷ್ಟ ಮಠದ ಯತಿಗಳು ಮತ್ತು ಇತರರು ಹಿಂದೂ ಎಂದೇ ಮನಗಾಣುತ್ತಾರೆ.ನಗರಸಭೆ ಸದಸ್ಯನಾಗುವ ಸಂದರ್ಭದಲ್ಲಿ ಎಲ್ಲಾ ಸಮಾಜದ ಬಾಂಧವರು ನನ್ನನ್ನು ಬೆಂಬಲಿಸಿದ್ದಾರೆ.ಹಿರಿಯರ ಮಾರ್ಗದರ್ಶನ ಕಿರಿಯರ ಸಹಕಾರದಲ್ಲಿ ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago