ಉಡುಪಿ : ಟಿಕೆಟ್ ಮಿಸ್ ಆದ ಬೆನ್ನಲ್ಲೆ ಶಾಸಕ ರಘುಪತಿ ಭಟ್ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಪಕ್ಷ ಸೇರುವುದಿಲ್ಲ ಆದರೆ ಟಿಕೆಟ್ ಹಂಚಿಕೆ ಸಂದರ್ಭ ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿದೆ ಎಂದಿದ್ದಾರೆ.
ಪೆರಂಪಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಪಕ್ಷ ಸೀಟ್ ನೀಡದೇ ಇರುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಮತ್ತು ಶಾಕ್ ಕೂಡ ಆಗಿದೆ.
ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಡುವ ಪ್ರಶ್ನೆಯೇ ಇಲ್ಲ. ಯಾಕೆ ಹೀಗಾಯಿತು ಎಂಬುದು ತುಂಬ ಬೇಸರ ತಂದಿದೆ. ನಾನು ಬೆಳೆಸಿದ ಹುಡುಗ ಇಂದು ಅಭ್ಯರ್ಥಿಯಾಗಿದ್ದು, ಅವರಿಗೆ ಶುಭಾಶಯ ಕೋರುತ್ತೇನೆ. ಅಭ್ಯರ್ಥಿ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಉಡುಪಿಯಲ್ಲಿ ಪಾರ್ಟಿ ಕಟ್ಟಿದ್ದೇನೆ ಮತ್ತು ಬಿಜೆಪಿಯಿಂದ ಇಲ್ಲಿ ಯಾರು ನಿಂತರೂ ಗೆಲ್ಲಲಿದ್ದಾರೆ ಅಂತಹ ಸ್ಥಿತಿ ನಿರ್ಮಾಣ ಮಾಡಿದ್ದೇನೆ. ಪಕ್ಷಕ್ಕೆ ಈಗ ನನ್ನ ಅವಶ್ಯಕತೆ ಇಲ್ಲ ಎಂಬುದು ತೋರಿಸುತ್ತಿದ್ದಾರೆ. ಅಮಿತ್ ಶಾ ಬೇಡ, ರಾಜ್ಯ ನಾಯಕರು ಅಥವಾ ಜಿಲ್ಲಾಧ್ಯಕ್ಷರು ಕರೆ ಮಾಡದೇ ಇರುವುದು ಬೇಸರ ತಂದಿದೆ ಎಂದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…