ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, ಮೊಗವೀರ ಮಹಾಜನ ಸಂಘದಲ್ಲಿ 12 ವರ್ಷ ಅಧ್ಯಕ್ಷನಾಗಿದ್ದೆ. ಕರ್ನಾಟಕ ಕರಾವಳಿ ಕ್ರಿಯಾ ಸಮಿತಿ ನ್ಯಾಷನಲ್ ಫಿಶ್ ವರ್ಕರ್ಸ್ ಫಾರಂ ನಲ್ಲಿ ಕೆಲಸ ಮಾಡಿದ್ದೇನೆ ಒಳನಾಡು ಮೀನುಗಾರಿಕಾ ನೀತಿಯನ್ನು ಕೂಡ ನಾನು ರೂಪಿಸಿದ್ದಾಗಿದೆ. ಮೀನುಗಾರಿಕೆಗೆ ನಾನು ತಂದೆ ತಾಯಿ ನೀಡಿರುವ ಸೇವೆ ಪರಿಗಣಿಸಬಹುದು.ಮೀನುಗಾರರ ಸಮಸ್ಯೆಯನ್ನು ಸರ್ಕಾರಗಳ ಮುಂದೆ ಸಮರ್ಥವಾಗಿ ಮಂಡಿಸುವ ಅನುಭವ ಜನಪ್ರತಿನಿಧಿ ಆದವರಿಗೆ ಬೇಕಾಗುತ್ತದೆ. ಮೀನುಗಾರರು ವಿಶ್ವಾಸ ಇಟ್ಟು ಇಡೀ ರಾಜ್ಯದಿಂದ ಬೇಡಿಕೆ ಬರುತ್ತಿದೆ ಆದ್ದರಿಂದ ಬಿಜೆಪಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಗುಜರಾತ್ ನಿಂದ ಪಶ್ಚಿಮ ಬಂಗಾಳದವರೆಗೆ ಒಬ್ಬನೇ ಒಬ್ಬ ಮೀನುಗಾರ ಸಂಸದ ಇಲ್ಲ. ದೇಶದ ಮೀನುಗಾರರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಮುಂದೆ ಸಂಸತ್ ನಲ್ಲಿ ಮಾತನಾಡಲಿಕ್ಕೆ ಯೋಗ್ಯ ವ್ಯಕ್ತಿ ಬೇಕು ಎಂಬುದು ಮೀನುಗಾರರಿಗೆ ಮನವರಿಕೆ ಆಗಿದೆ. ಮಾಧ್ಯಮಗಳ ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಆರು ತಿಂಗಳಿಂದ ನಾನು ಪ್ರವಾಸ ಮಾಡುತ್ತಿದ್ದೇನೆ. ರಾಜ್ಯದ 24 ಜಿಲ್ಲೆಯಲ್ಲಿ ಮೀನುಗಾರ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ಚಿಕ್ಕಮಗಳೂರಿನಲ್ಲಿ 6000 ಬಿಜೆಪಿಯ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿದ್ದೇನೆ ಎಂದರು.
ಪಕ್ಷ ಬಯಸಿದರೆ ನಾನು ಚುನಾವಣೆಗೆ ನಿಲ್ಲಲು ಸಿದ್ಧ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್ ಕೊಡುತ್ತದೆ. ಬೇರೆಯವರು ಅರ್ಹರು ಇದ್ದರೆ ಅವರಿಗೆ ಟಿಕೆಟ್ ಕೊಡುತ್ತದೆ ಎಂದರು.
ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ. ಟಿಕೆಟ್ ಗೆ ಎಲ್ಲರಿಗೂ ಪ್ರಯತ್ನ ಮಾಡುವ ಹಕ್ಕು ಇದೆ. ನಾನು ಆಕಾಂಕ್ಷಿ ಎಂದು ನಾಯಕರ ಬಳಿ ಹೇಳಿದ್ದೇನೆ. ಚುನಾವಣೆಯಲ್ಲಿ ಎದುರಾಳಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಎದುರಾಳಿಯನ್ನು ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…