ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಛಾಟನೆ – Vishwanews24
ಮಂದಾರ್ತಿ ಗ್ರಾ. ಪಂ.ಚುನಾವಣೆ – ಬಿಜೆಪಿ ಸದಸ್ಯರಾಗಿದ್ದು ಕಾoಗ್ರೇಸ್ ಅಭ್ಯರ್ಥಿ ಪರ ಮತ ಚಲಾವಣೆ..
ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಛಾಟನೆ..
ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಂದಾರ್ತಿ ಗ್ರಾಮ ಪಂಚಾಯತ್ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಕಾoಗ್ರೇಸ್ ಬೆಂಬಲಿತ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಸುಕುಮಾರ್ ಶೆಟ್ಟಿ
ಮತ್ತು ಜ್ಯೋತಿ ಎಸ್. ಹೆಗ್ಡೆಯವರನ್ನು ಕುಂದಾಪುರ ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ರವರ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ
ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
