ಉಡುಪಿ: ಪಕ್ಷದ ಪ್ರತಿ ಚಟುವಟಿಕೆಗಳಲ್ಲಿ ಜಿಲ್ಲಾ ಸಮಿತಿಯೊಂದಿಗೆ ಪ್ರತಿ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ಕ್ರಿಯಾಶೀಲತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಮಂಡಲಗಳ ಪ್ರಭಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಉಸ್ತುವಾರಿಗಳು, ಮೋರ್ಚಾ-ಪ್ರಕೋಷ್ಠಗಳ ಸಂಯೋಜಕರ ಯಾದಿ ಬಿಡುಗಡೆಗೊಳಿಸಿ ಮಾತನಾಡಿದರು.
ಪಕ್ಷದ ಅಧಿಕೃತ ಕಾರ್ಯಕ್ರಮ ಸಮಯದ ಇತಿಮಿತಿಯೊಳಗೆ ನಿರ್ವಹಿಸಿ, ಸಂಘಟನಾತ್ಮಕ ದೃಷ್ಟಿಯಿಂದ ವಿವಿಧ ಸ್ತರದ ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸುವುದರ ಜೊತೆಗೆ ಮುಂಬರಲಿರುವ ಗ್ರಾಪಂ ಚುನಾವಣೆ ಭರ್ಜರಿ ಗೆಲುವಿನ ಗುರಿಯೊಂದಿಗೆ ಸಮರ್ಥವಾಗಿ ಎದುರಿಸಲು ಎಲ್ಲರೂ ಸಜ್ಜಾಗಬೇಕು ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ಇಂದು ಸರ್ವಸ್ಪರ್ಶಿ ಸರ್ವವ್ಯಾಪಿ ರಾಜಕೀಯ ಪಕ್ಷವಾಗಿದೆ. ಪಕ್ಷದ ತತ್ವ ಸಿದ್ಧಾಂತ ಮತ್ತು ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿಯ ಮೆಚ್ಚಿ ಅಸಂಖ್ಯಾತ ಕಾರ್ಯಕರ್ತರು ಬದ್ಧತೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಕೇಂದ್ರ, ರಾಜ್ಯ ಸರಕಾರದ ವಿವಿಧ ಜನಪರ ಯೋಜನೆಗಳನ್ನು ಬೂತ್ ಮಟ್ಟಕ್ಕೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು. ಸತತ ಪ್ರಯತ್ನ, ಸಾಧನೆಯಿಂದ ಯಶಸ್ಸು ಸಾಧ್ಯ. ಈ ನಿಟ್ಟಿನಲ್ಲಿ ಸದ್ಯದಲ್ಲೇ ನಡೆಯಲಿರುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಪರ ಇರುವ ಪೂರಕ ವಾತಾವರಣ ಸದುಪಯೋಗಗೊಳಿಸಿ ಎಲ್ಲಾ ಪಂಚಾಯತ್‍ಗಳಲ್ಲಿ ಅದ್ಬುತ ಗೆಲುವು ಸಾಧಿಸುವತ್ತ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದರು.
ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮಂಡಲಗಳ ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್‌ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…