Featured

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ – vishwanews24

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ

ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ ಹಾಗೂ ಅಂತ್ಯೋದಯ  ಪಡಿತರ ಚೀಟಿಯಲ್ಲಿರುವ ಎಲ್ಲಾ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 2026ರ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುವುದರಿಂದ, ಫಲಾನುಭವಿಗಳು ಕೂಡಲೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ.

ಅರ್ಹ ಫಲಾನುಭವಿಗಳಿಗೆ ಪಡಿತರ ವ್ಯವಸ್ಥೆ ಸುಸೂತ್ರವಾಗಿ ತಲುಪಿಸುವ ಉದ್ದೇಶದಿಂದ, ಇ-ಕೆವೈಸಿ ಮಾಡಿಸಿ ಐದು ವರ್ಷ ಪೂರ್ಣಗೊಂಡಿರುವ ಕಾರ್ಡುದಾರರಿಗೆ ಸರ್ಕಾರವು ಪುನಃ ಇ-ಕೆವೈಸಿ ಪ್ರಕ್ರಿಯೆಯನ್ನು ಕೈಗೊಂಡಿದೆ. ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇರುವ ಪಡಿತರ ಚೀಟಿದಾರರ ಪಟ್ಟಿಯನ್ನು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ನೀಡಲಾಗಿದೆ. ಜಿಲ್ಲೆಯಾದ್ಯಂತ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬಾಕಿ ಇರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಇ-ಕೆವೈಸಿ ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ವಲಸೆ ಹೋಗಿರುವ ಅಥವಾ ಊರು ತೊರೆದಿರುವ ಪಡಿತರ ಚೀಟಿದಾರರು ಸಹ ತಮ್ಮನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿಕೊಂಡು ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.

ಅಗತ್ಯವಿರುವ ದಾಖಲೆಗಳು:
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಕೆಳಗಿನ ದಾಖಲೆಗಳೊಂದಿಗೆ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾಗುತ್ತದೆ

ಪಡಿತರ ಚೀಟಿ 
ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್
ಎಲ್.ಪಿ.ಜಿ ಗ್ಯಾಸ್ ಪಾಸ್‌ಬುಕ್ 

Vishwa News 24

Recent Posts

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ – vishwanews24

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ ;  ಪ್ರಕರಣಕ್ಕೆ ಮಹತ್ವದ ತಿರುವು ಬೆಂಗಳೂರು: ಬೆಂಗಳೂರಿನ…

8 minutes ago

ಮೈಸೂರು ಕಂಬಳದ ಕುರಿತು ಇದುವರೆಗೆ ಯಾವುದೇ ಅಧಿಕೃತ ಸಂವಹನ ನಡೆದಿಲ್ಲ : ದೇವಿಪ್ರಸಾದ್ ಶೆಟ್ಟಿ ಬೆಳಪು – vishwanews24

ಮೈಸೂರು ಕಂಬಳಕ್ಕೆ ಅಧಿಕೃತ ಆಹ್ವಾನ ಬಂದ ಬಳಿಕವಷ್ಟೇ ಅಂತಿಮ ನಿರ್ಧಾರ: ದೇವಿಪ್ರಸಾದ್ ಶೆಟ್ಟಿ ಬೆಳಪು ಮೂಡುಬಿದಿರೆ: ಮೈಸೂರಿನಲ್ಲಿ ಕಂಬಳ ಆಯೋಜಿಸುವ…

56 minutes ago

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಬೆಂಗಳೂರು: ನಗರದ ವಿವಿಧೆಡೆ ಆಹಾರ…

1 hour ago

ಮುಖ್ಯಮಂತ್ರಿಯಾಗಿ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ವಿಧಾನಸೌಧದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ – vishwanews24

ಸಿಎಂ ಡಿ.ಕೆ. ಶಿವಕುಮಾರ್‌ ಸರ್ಕಾರಕ್ಕೆ 100 ದಿನದ ಸಂಭ್ರಮ.. ನಾಳೆ ವಿಧಾನಸೌಧದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ…

1 hour ago

ಮಂಗಳೂರು: ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಯುವಕ ನಾಪತ್ತೆ – vishwanews24

ಮಂಗಳೂರು: ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ಯುವಕ ನಾಪತ್ತೆ ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ…

1 hour ago

ಬೆಳ್ತಂಗಡಿ: ಶಾಲಾ ಮೈದಾನದ ಬಳಿ ಮಾದಕ ವಸ್ತು ಮಾರಾಟ ಪ್ರಕರಣ ; ಇಬ್ಬರ ಬಂಧನ – vishwanews24

ಬೆಳ್ತಂಗಡಿ: ಶಾಲಾ ಮೈದಾನದ ಬಳಿ ಮಾದಕ ವಸ್ತು ಮಾರಾಟ ಪ್ರಕರಣ ; ಇಬ್ಬರ ಬಂಧನ ಬೆಳ್ತಂಗಡಿ : ಮಾದಕ ದ್ರವ್ಯ…

1 hour ago