Featured

ಉಡುಪಿ : ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್‌ ಗೆ ಪೊಲೀಸರ ಅಡ್ಡಿ ; ಸೋಶಿಯಲ್‌ ಮೀಡಿಯಾದಲ್ಲಿ ಮಾಡೆಲ್‌ ಬೇಸರ – vishwanews24

ಉಡುಪಿ : ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ..

ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು..?

ಬೀಚ್‌ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು ?

ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಪೊಲೀಸರಿಗೆ ಮಾಡೆಲ್‌ ಪ್ರಶ್ನೆ

ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ..

ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಮಾಡೆಲ್‌ವೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವತಿಯ ಇನ್​ಸ್ಟಾಗ್ರಾಂ ಪ್ರೊಫೈಲ್ ಮಾಹಿತಿ ಪ್ರಕಾರ ಆಕೆ ಡಿಜಿಟಲ್ ಕ್ರಿಯೇಟರ್ ಆಗಿದ್ದಾರೆ. ಆಕೆ ರೂಪದರ್ಶಿಯೂ ಆಗಿದ್ದಾರೆ ಎನ್ನಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್‌ ಮಾಡಿದ ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್‌ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್‌ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಬಿಕಿನಿ ಹಾಕಿಕೊಂಡು ಫೋಟೊಶೂಟ್‌ ಮಾಡಿಸಲು ಯಾರು ಪರ್ಮಿಷನ್‌ ಕೊಟ್ಟಿದ್ದು ಯಾರು? ಬಟ್ಟೆ ಬದಲಿಸಿ ಎಂದು ಸೂಚಿಸಿದ್ದರಂತೆ. ಇಲ್ಲದೇ ಹೋದರೆ ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದರಂತೆ.

ಆಗ ಮಾಡೆಲ್‌ನ ಪತಿ ಪ್ರತಿಕ್ರಿಯಿಸಿ ಬೀಚ್‌ನಲ್ಲಿ ಬಿಕಿನಿ ಧರಿಸುವುದು ಯಾವುದೇ ಅಪರಾಧವಲ್ಲ. ಸಾರ್ವಜನಿಕ ಸ್ಥಳದಲ್ಲಿ ಫೋಟ್‌ಶೂಟ್‌ ಮಾಡಲು ಯಾವುದೇ ಲೈಸೆನ್ಸ್‌ ಪಡೆಯುವ ಅಗತ್ಯವಿಲ್ಲ ಎಂದಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾರೆ. ಬೀಚ್‌ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್‌ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಪೊಲೀಸರಿಗೆ ಮಾಡೆಲ್‌ ಪ್ರಶ್ನೆ ಮಾಡಿದ್ದಾಳೆ.

 

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿವೆ. ಫ್ಯಾಷನ್‌ ವಲಯದಲ್ಲಿ ಪೊಲೀಸರ ನಡೆಗೆ ವಿರೋಧಗಳು ವ್ಯಕ್ತವಾಗಿವೆ.

ಮಹಿಳೆ ವಿರುದ್ಧ ಹಿಂದೂ ಸಂಘಟನೆಗಳು ಗರಂ
ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೋಶೂಟ್ ವಿಚಾರವಾಗಿ ಹಿಂದು ಸಂಘಟನೆಗಳು ಗರಂ ಆಗಿವೆ. ಬಿಕಿನಿ ಫೋಟೋ ವೈರಲ್ ಬೆನ್ನಲ್ಲೇ ಬಿಕಿನಿ ಫೋಟೋಶೂಟ್‌ಗೆ ಉಡುಪಿಯಲ್ಲಿ ಅವಕಾಶವಿಲ್ಲ. ಅಸಭ್ಯ ವರ್ತನೆಗೆ ತುಳುನಾಡಲ್ಲಿ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

16 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

16 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

21 hours ago