ಉಡುಪಿ : ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ಇವರು 12 ವರ್ಷಗಳ ಹಿಂದೆ ರಾಜು ಎಂಬವರನ್ನು ವಿವಾಹವಾಗಿದ್ದು, ಅವರು ಕಳೆದ 7-8 ವರ್ಷಗಳಿಂದ ಬೈಲೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಮಕ್ಕಳೊಂದಿಗೆ ವಾಸಮಾಡಿಕೊಂಡಿದ್ದರು.
ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಜು.26ರಂದು ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜು.28ರಂದು ಮೃತಪಟ್ಟರು ಎಂದು ತಿಳಿದುಬಂದಿದೆ. ಕಮಾಲಾಕ್ಷಿಯ ಸಾವಿಗೆ ಆಕೆಯ ಗಂಡ ರಾಜು ನಿಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯೇ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…