ಉಡುಪಿ :ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ – Vishwanews24

Featured, ಉಡುಪಿ

ಉಡುಪಿ :ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5 ಲಕ್ಷ  ರೂ. ದೇಣಿಗೆ ಹಸ್ತಾಂತರ

ಉಡುಪಿ(Vishwanews24): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜ್ಯುಕೇಶನ್(ಮಾಹೆ) ವತಿಯಿಂದ 5ಲಕ್ಷ ರೂ. ದೇಣಿಗೆಯನ್ನು ಬುಧವಾರ ಹಸ್ತಾಂತರಿಸಲಾಯಿತು.

ಮಣಿಪಾಲ ಮಾಹೆಯ ಎಜ್ಯು ಬಿಲ್ಡಿಂಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ 5ಲಕ್ಷ ರೂ. ಮೊತ್ತದ ಚೆಕ್‌ನ್ನು ಹಸ್ತಾಂತರಿಸಿದರು. ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಉಪಕುಲಪತಿ ಡಾ.ಶರತ್ ರಾವ್ ಹಾಜರಿದ್ದರು.

ತಮಿಳುನಾಡಿನಲ್ಲಿಅಣ್ಣಾಮಲೈ ಸಮ್ಮುಖದಲ್ಲಿ ಬಿಜೆಪಿ ಸೇರಿದ 15 ಮಾಜಿ ನಾಯಕರು – Vishwanews24

ಈ ಸಂದರ್ಭದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಂಘದ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು.

ಫೆ.12ರಿಂದ 23ರವರೆಗೆ ಬಜೆಟ್‌ ಅಧಿವೇಶನ , ಫೆ.16ಕ್ಕೆ ಬಜೆಟ್‌ ಮಂಡನೆ : ಯು.ಟಿ ಖಾದರ್‌ – Vishwanews24

Leave a Reply