ಉಡುಪಿ(Vishwanews24): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜ್ಯುಕೇಶನ್(ಮಾಹೆ) ವತಿಯಿಂದ 5ಲಕ್ಷ ರೂ. ದೇಣಿಗೆಯನ್ನು ಬುಧವಾರ ಹಸ್ತಾಂತರಿಸಲಾಯಿತು.
ಮಣಿಪಾಲ ಮಾಹೆಯ ಎಜ್ಯು ಬಿಲ್ಡಿಂಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ 5ಲಕ್ಷ ರೂ. ಮೊತ್ತದ ಚೆಕ್‌ನ್ನು ಹಸ್ತಾಂತರಿಸಿದರು. ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಉಪಕುಲಪತಿ ಡಾ.ಶರತ್ ರಾವ್ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಂಘದ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…