Featured

ಉಡುಪಿ : ಪರಂಪರಾಗತ ಪೌಷ್ಟಿಕ ಆಹಾರಗಳಿಗೆ ಒತ್ತು ನೀಡಿ : ಲಾಲಾಜಿ ಆರ್ ಮೆಂಡನ್ -Vishwanews24

ಉಡುಪಿ : ಪರಂಪರಾಗತ ಪೌಷ್ಟಿಕ ಆಹಾರಗಳಿಗೆ ಒತ್ತು ನೀಡಿ : ಲಾಲಾಜಿ ಆರ್ ಮೆಂಡನ್ -Vishwanews24

ಉಡುಪಿ : ಪರಂಪರಾಗತ ಪೌಷ್ಠಿಕ ಆಹಾರಗಳಿಗೆ ಹೆಚ್ಚು ಒತ್ತನ್ನು ನೀಡಿ, ಆರೋಗ್ಯಯುತ ಉತ್ತಮ ಹಾಗೂ ಬಲಿಷ್ಠ ಸಮಾಜ ನಿರ್ಮಿಸುವಂತೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಲಹೆ ನೀಡಿದರು.

ಅವರು ಇಂದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ತಾಲೂಕು ಪಂಚಾಯತ್ ಕಾಪು, ಬಡಾ ಗ್ರಾಮ ಪಂಚಾಯತ್ ಹಾಗೂ ಸರಸ್ವತಿ ಶಾಲೆ ಉಚ್ಚಿಲ ಇವರ ಸಹಯೋಗದೊಂದಿಗೆ, ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಪಕ್ವಾಡ-2021 ರಲ್ಲಿ ಪೋಷಣ್ ಪಂಚಸೂತ್ರಗಳು-ವಿಶೇಷ ಆರೋಗ್ಯ ತಪಾಸಣೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪರಂಪರಾಗತ ಉತ್ತಮ ಆಹಾರ ಪದ್ಧತಿಗಳ ಕುರಿತು ನಡೆದ ಜಾಗೃತಿ ಮತ್ತು ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ, ಮಾತನಾಡಿದರು.

ಇದನ್ನೂ ಓದಿ :ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24

ಕೊರೋನ ಮಹಾಮಾರಿಯ ನಿಯಂತ್ರಣಕ್ಕೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ವೈಯುಕ್ತಿಕ ಸ್ವಚ್ಛತೆ ಕುರಿತು ಕಾಳಜಿ ವಹಿಸುವಂತೆ ತಿಳಿಸಿದರು.ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರಗಳ ಪ್ರಾತ್ಯಕ್ಷತೆ ಹಾಗೂ ಮಹಿಳೆಯರಿಗಾಗಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ರಕ್ತಹೀನತೆ ಪರೀಕ್ಷೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿಆರೋಗ್ಯ ನಿರೀಕ್ಷಕ ದೇವಪ್ಪ ಪಟಗಾರ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಯು.ಸಿ. ಶೇಕಬ್ಬ, ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಕುಂತಲ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಶಾಲಿನಿ ವಿ.ಎಸ್, ಸರಸ್ವತಿ ಶಾಲೆಯ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ನಿರ್ಮಲ ನಿರೂಪಿಸಿ ವಂದಿಸಿದರು.

ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago