ಉಡುಪಿ: ಕರಾವಳಿಯಲ್ಲಿ ಭಾರೀ ವಾದ-ವಿವಾದಕ್ಕೆ ಕಾರಣವಾದ, ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನಿರ್ಮಾಣ ಗೊಂಡು ಅಂದಿನ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಪತ್ರಿಮೆಯ ಅಸಲಿತನ ಹಾಗೂ ಪರಶುರಾಮ ಪಾರ್ಕ್‌ನ ಅಕ್ರಮ-ಅವ್ಯವಹಾರದ ಕುರಿತು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗರು, ಪರಶುರಾಮ ಥೀಮ್ ಪಾರ್ಕ್ ಅಕ್ರಮದ ಕುರಿತು ಗಮನ ಸೆಳೆದು, ಈ ಬಗ್ಗೆ ತನಿಖೆ ನಡೆಸುವಂತೆ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ವಿಧಾನಪರಿಷತ್ ಸದಸ್ಯನಾದ ತನಗೆ ಪತ್ರ ಬರೆದಿದ್ದರು ಎಂದು ಅವರು ತಿಳಿಸಿದರು.
ಈ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಪಟ್ಟಂತೆ ಸರ್ವಜನಿಕರಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದು, ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪರಶುರಾಮ ಪ್ರತಿಮೆಯ ಸಾಚಾತನದ ಬಗ್ಗೆ ಅನುಮಾನಗಳು ವ್ಯಕ್ತವಾಗಿ ದ್ದವು ಎಂದರು. ಈ ಬಗ್ಗೆ ತನಿಖೆ ನಡೆಸುವಂತೆ ಪ್ರವಾಸೋದ್ಯಮ ಇಲಾಖೆ ಹಾಗೂ ಸರಕಾರದ ಮೇಲೆ ಕಾರ್ಕಳದ ಕಾಂಗ್ರೆಸ್ ಪಕ್ಷ ಸೇರಿದಂತೆ ಸ್ಥಳೀಯ ವಿವಿಧ ಸಂಘಟನೆಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು ಎಂದರು.
ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿದ ಸರಕಾರ ಮತ್ತು ಪಕ್ಷ ಇದರ ಬಗ್ಗೆ ವಿವರವಾದ ವರದಿಯೊಂದನ್ನು ಸಲ್ಲಿಸುವಂತೆ ತನಗೆ ಸೂಚಿಸಿತ್ತು ಎಂದು ಮಂಜುನಾಥ ಭಂಡಾರಿ ತಿಳಿಸಿದರು. ಇದರಂತೆ ತಾನು ಅ.19ರಂದು ಸ್ಥಳೀಯ ನಾಯಕ ರೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರಿಗೆ ವಿವರವಾದ ವರದಿ ಸಲ್ಲಿಸಿದ್ದಾಗಿ ಭಂಡಾರಿ ತಿಳಿಸಿದರು.
ಇದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮನವಿಯನ್ನು ಆಧರಿಸಿ ನ.15ರಂದು, ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲದ ನಿವಾರಣೆಗಾಗಿ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಗೆ ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾದ್ಯಕ್ಷ ಅಶೋಕಕುಮಾರ್ ಕೊಡವೂರು, ಕಾಂಗ್ರೆಸ್ ನಾಯಕರಾದ ಉದಯಕುಮಾರ್ ಶಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…