Featured

ಉಡುಪಿ : ಪರಶುರಾಮ ಪ್ರತಿಮೆ ಅಸಲಿತನ, ಅಕ್ರಮ-ಅವ್ಯವಹಾರದ ಕುರಿತು ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ: ಮಂಜುನಾಥ ಭಂಡಾರಿ – vishwanews24

ಉಡುಪಿ : ಪರಶುರಾಮ ಪ್ರತಿಮೆ ಅಸಲಿತನ, ಅಕ್ರಮ-ಅವ್ಯವಹಾರದ ಕುರಿತು ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ: ಮಂಜುನಾಥ ಭಂಡಾರಿ

ಉಡುಪಿ: ಕರಾವಳಿಯಲ್ಲಿ ಭಾರೀ ವಾದ-ವಿವಾದಕ್ಕೆ ಕಾರಣವಾದ, ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನಿರ್ಮಾಣ ಗೊಂಡು ಅಂದಿನ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಪತ್ರಿಮೆಯ ಅಸಲಿತನ ಹಾಗೂ ಪರಶುರಾಮ ಪಾರ್ಕ್‌ನ ಅಕ್ರಮ-ಅವ್ಯವಹಾರದ ಕುರಿತು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ  ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗರು, ಪರಶುರಾಮ ಥೀಮ್ ಪಾರ್ಕ್ ಅಕ್ರಮದ ಕುರಿತು ಗಮನ ಸೆಳೆದು, ಈ ಬಗ್ಗೆ ತನಿಖೆ ನಡೆಸುವಂತೆ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ವಿಧಾನಪರಿಷತ್ ಸದಸ್ಯನಾದ ತನಗೆ ಪತ್ರ ಬರೆದಿದ್ದರು ಎಂದು ಅವರು ತಿಳಿಸಿದರು.

ಈ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಪಟ್ಟಂತೆ ಸರ್ವಜನಿಕರಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದು, ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪರಶುರಾಮ ಪ್ರತಿಮೆಯ ಸಾಚಾತನದ ಬಗ್ಗೆ ಅನುಮಾನಗಳು ವ್ಯಕ್ತವಾಗಿ ದ್ದವು ಎಂದರು. ಈ ಬಗ್ಗೆ ತನಿಖೆ ನಡೆಸುವಂತೆ ಪ್ರವಾಸೋದ್ಯಮ ಇಲಾಖೆ ಹಾಗೂ ಸರಕಾರದ ಮೇಲೆ ಕಾರ್ಕಳದ ಕಾಂಗ್ರೆಸ್ ಪಕ್ಷ ಸೇರಿದಂತೆ ಸ್ಥಳೀಯ ವಿವಿಧ ಸಂಘಟನೆಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು ಎಂದರು.

ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿದ ಸರಕಾರ ಮತ್ತು ಪಕ್ಷ ಇದರ ಬಗ್ಗೆ ವಿವರವಾದ ವರದಿಯೊಂದನ್ನು ಸಲ್ಲಿಸುವಂತೆ ತನಗೆ ಸೂಚಿಸಿತ್ತು ಎಂದು ಮಂಜುನಾಥ ಭಂಡಾರಿ ತಿಳಿಸಿದರು. ಇದರಂತೆ ತಾನು ಅ.19ರಂದು ಸ್ಥಳೀಯ ನಾಯಕ ರೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರಿಗೆ ವಿವರವಾದ ವರದಿ ಸಲ್ಲಿಸಿದ್ದಾಗಿ ಭಂಡಾರಿ ತಿಳಿಸಿದರು.

ಇದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮನವಿಯನ್ನು ಆಧರಿಸಿ ನ.15ರಂದು, ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲದ ನಿವಾರಣೆಗಾಗಿ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಗೆ ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾದ್ಯಕ್ಷ ಅಶೋಕಕುಮಾರ್ ಕೊಡವೂರು, ಕಾಂಗ್ರೆಸ್ ನಾಯಕರಾದ ಉದಯಕುಮಾರ್ ಶಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago