Featured

ಉಡುಪಿ ಪರಿಷತ್ ಚುನಾವಣೆ ಫಲಿತಾಂಶ : ದ.ಕ-ಉಡುಪಿ ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ: ಬಿ.ಎಲ್ ಸಂತೋಷ್ – Vishwanews24

ಉಡುಪಿ ಪರಿಷತ್ ಚುನಾವಣೆ ಫಲಿತಾಂಶ : ದ.ಕ-ಉಡುಪಿ ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ, ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು : ಬಿ.ಎಲ್ ಸಂತೋಷ್ – Vishwanews24

ಕೋಟ ಶ್ರೀನಿವಾಸ್ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ..

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ ಎಂದು ಬಿಜೆಪಿ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ ನಡೆದು ಫಲಿತಾಂಶ ಬಂದಿದೆ. ಬುದ್ಧಿವಂತರ ಚುನಾವಣೆ ಮಾದರಿ ಎಂದೆಲ್ಲಾ ಇವರಿಗೆ ಬಿಂಬಿತವಾದ ಪರಿಷತ್ ಚುನಾವಣೆಗೆ ಕೋಟಿ ಕೋಟಿ ರೂಪಾಯಿ ಹಣದ ಹೊಳೆ ಹರಿದ ಬಗ್ಗೆ ಜಿಲ್ಲಾ ಮಟ್ಟದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡ ಸಂತೋಷ್ ಅವರು ಖೇದ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರು, ಮತಗಳು, ಮತ ಹಾಕಿದ ಪ್ರತಿನಿಧಿಗಳು ಖರೀದಿಯಾಗಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.

ದ.ಕ-ಉಡುಪಿ ಶೇ.99 ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು. ನಾವು ಮಾರಾಟಕ್ಕಿಲ್ಲ, ದಾಕ್ಷಿಣ್ಯಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಸಾರ್ವಜನಿಕ ವ್ಯವಸ್ಥೆಯಲ್ಲಿ ಇರುವವರಿಗೆ ಈ ಬದ್ಧತೆ ಬೇಕು ಎಂದು ಕರೆ ನೀಡಿದರು.

ಕೆಲ ಜಿಲ್ಲೆಗಳಲ್ಲಿ ಕೋಟ್ಯಂತರ ರೂಪಾಯಿ ಪರಿಷತ್ತಿನ ಚುನಾವಣೆಗೆ ಖರ್ಚಾಗಿದೆ. ಆಮಿಷಗಳಿಗೆ ಮಣಿದು ಜನಪ್ರತಿನಿಧಿಗಳು ಮತ ಚಲಾವಣೆ ಮಾಡಿರುವುದು ಜಗಜ್ಜಾಹೀರಾಗಿದೆ. ದ.ಕ ಉಡುಪಿ ಬಿಜೆಪಿ ಅಭ್ಯರ್ಥಿ ಒಂದು ರೂಪಾಯಿ ಖರ್ಚು ಮಾಡದೆ ಗೆದ್ದಿದ್ದಾರೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೆಸರು ಉಲ್ಲೇಖ ಮಾಡದೇ ವಿಷಯ ಪ್ರಸ್ತಾಪ ಮಾಡಿದರು.

ವಿಧಾನ ಪರಿಷತ್ ರದ್ದು ಗೊಳಿಸುವ ಸಮಯ ಬಂದಿದೆಯಲ್ಲವೇ? ಅಂತ ಪಕ್ಷದ ಹಿರಿಯ ಮತ್ತು ಸಂವೇದನೆ ಇರುವ ಕಾರ್ಯಕರ್ತರೊಬ್ಬರು ನನ್ನನ್ನು ಪ್ರಶ್ನಿಸಿದರು. ದ.ಕನ್ನಡದ ಉಡುಪಿ ಜಿಲ್ಲೆಯಲ್ಲಿ ಈ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರೂ ವೋಟ್ ಮಾರಾಟ ಮಾಡಬಾರದು ಅದೊಂದು ನಡವಳಿಕೆ. ನಾನು ಮಾರಾಟಕ್ಕಿಲ್ಲ ಎನ್ನುವುದು ರಾಜಕಾರಣಿಯೊಬ್ಬನಿಗೆ ಇರಬೇಕಾದ ಅತಿ ದೊಡ್ಡ ಗುಣ ಎಂದು ಹೇಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago