Featured

ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ :  ಜಿಲ್ಲಾಧಿಕಾರಿ – vishwanews24

ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ :  ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

   ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. 

   ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.

  ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,21,624, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 92,598 ಪುರುಷರು, 1,00583 ಮಹಿಳೆಯರು ಹಾಗೂ 4 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1,93,185 ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 93,003 ಪುರುಷರು, 1,00,685 ಮಹಿಳೆಯರು ಸೇರಿದಂತೆ ಒಟ್ಟು 1,93,688 ಒಟ್ಟಾರೆ ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ 10,61,289 ಮತದಾರರಿರುತ್ತಾರೆ.

   ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ನಮೂನೆ -6 ರಲ್ಲಿ 3,998, ನಮೂನೆ-6 ಎ ರಲ್ಲಿ 1, ನಮೂನೆ-8 ರಲ್ಲಿ 1288 ಸೇರಿದಂತೆ ಒಟ್ಟು  5287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿ, 5286 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆ.  ನಮೂನೆ-7 ರಲ್ಲಿ 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ನಮೂನೆ-8 ರಲ್ಲಿ ತಿದ್ದುಪಡಿಗಾಗಿ 5499 ಜನರಿಂದ ಅರ್ಜಿಗಳು ಸಲ್ಲಿಕೆಯಾದರೆ, 7398 ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದರು. 

   ಮತದಾರರ ಪಟ್ಟಿಗೆ ಸಂಬ0ಧಿಸಿದ0ತೆ ಯಾವುದೇ ರೀತಿಯ ಮಾಹಿತಿಯನ್ನು ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ ವೋಟರ್ ಹೆಲ್ಪ್ಲೈನ್ ನಂಬರ್ 1950 ಇದ್ದು, ಸಾರ್ವಜನಿಕರು ಈಗಾಗಲೇ ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. 

   ಇದೇ  ಜನವರಿ 25 ರಂದು ಜಿಲ್ಲಾ ಮಟ್ಟದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. 

ಇದೇ ಸಂದರ್ಭದಲ್ಲಿ ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು.  

   ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ವಾರ್ತಾಧಿಕಾರಿ ಮಂಜುನಾಥ್ ಬಿ, ಬಿ.ಜೆ.ಪಿಯ ಚಂದ್ರಶೇಖರ ಪ್ರಭು, ಕಾಂಗ್ರೇಸ್‌ನ ಹಬೀಬ್ ಅಲಿ, ಜೆ.ಡಿ.ಎಸ್‌ನ ಜಯರಾಂ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago