Featured

ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ :  ಜಿಲ್ಲಾಧಿಕಾರಿ – vishwanews24

ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ :  ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

   ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು

   ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.

  ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,21,624, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 92,598 ಪುರುಷರು, 1,00583 ಮಹಿಳೆಯರು ಹಾಗೂ 4 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1,93,185 ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 93,003 ಪುರುಷರು, 1,00,685 ಮಹಿಳೆಯರು ಸೇರಿದಂತೆ ಒಟ್ಟು 1,93,688 ಒಟ್ಟಾರೆ ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ 10,61,289 ಮತದಾರರಿರುತ್ತಾರೆ.

   ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ನಮೂನೆ -6 ರಲ್ಲಿ 3,998, ನಮೂನೆ-6 ರಲ್ಲಿ 1, ನಮೂನೆ-8 ರಲ್ಲಿ 1288 ಸೇರಿದಂತೆ ಒಟ್ಟು  5287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿ, 5286 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆನಮೂನೆ-7 ರಲ್ಲಿ 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ನಮೂನೆ-8 ರಲ್ಲಿ ತಿದ್ದುಪಡಿಗಾಗಿ 5499 ಜನರಿಂದ ಅರ್ಜಿಗಳು ಸಲ್ಲಿಕೆಯಾದರೆ, 7398 ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದರು

   ಮತದಾರರ ಪಟ್ಟಿಗೆ ಸಂಬ0ಧಿಸಿದ0ತೆ ಯಾವುದೇ ರೀತಿಯ ಮಾಹಿತಿಯನ್ನು ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ ವೋಟರ್ ಹೆಲ್ಪ್ಲೈನ್ ನಂಬರ್ 1950 ಇದ್ದು, ಸಾರ್ವಜನಿಕರು ಈಗಾಗಲೇ ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು

   ಇದೇ  ಜನವರಿ 25 ರಂದು ಜಿಲ್ಲಾ ಮಟ್ಟದ ರಾಷ್ಟಿçà ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಇದೇ ಸಂದರ್ಭದಲ್ಲಿ ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು.  

   ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ವಾರ್ತಾಧಿಕಾರಿ ಮಂಜುನಾಥ್ ಬಿ, ಬಿ.ಜೆ.ಪಿಯ ಚಂದ್ರಶೇಖರ ಪ್ರಭು, ಕಾಂಗ್ರೇಸ್ ಹಬೀಬ್ ಅಲಿ, ಜೆ.ಡಿ.ಎಸ್ ಜಯರಾಂ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago