Featured

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ – vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ : ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬ0ಧಿಸಿದ0ತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14 ರಂದು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವುದರೊಂದಿಗೆ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೈಸರ್ಗಿಕವಾಗಿ ನೀರಿನಲ್ಲಿ ಕರಗುವುದಿಲ್ಲ. ಇವು ಮಾಲಿನ್ಯ ಉಂಟುಮಾಡುವುದರೊAದಿಗೆ ಜಲಚರಗಳಿಗೆ ಹಾನಿ ಉಂಟು ಮಾಡುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

ನೈಸರ್ಗಿಕ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ತಾತ್ಕಾಲಿಕ/ ಕೃತಕ ವಿಸರ್ಜನಾ ತೊಟ್ಟಿಗಳಲ್ಲಿ ವಿಗ್ರಹಗಳನ್ನು ವಿಸರ್ಜನೆ ಮಾಡಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ ಹಾಗೂ ಒಣಕಸವನ್ನು ನೀರಿಗೆ ಎಸೆಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ನದಿ, ಕೆರೆ, ಕೊಳ ಅಥವಾ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜನೆ ಅನಿವಾರ್ಯವಾಗಿರುವಲ್ಲಿ ನಿಗಧಿತ ಸ್ಥಳಗಳಲ್ಲಿ ಸುರಕ್ಷತಾ ವ್ಯವಸ್ಥೆಗಳೊಂದಿಗೆ ಮೌಲಭೂತ ಸೌಕರ್ಯಗಳನ್ನು ನಿಗಧಿಪಡಿಸಿ, ರಕ್ಷಣಾ ತಂಡ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಪಿ.ಒ.ಪಿ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ತಡೆಗಟ್ಟಲು ಹಬ್ಬಕ್ಕೆ ಮುಂಚಿತವಾಗಿಯೇ ಮೂರ್ತಿ ತಯಾರಿಕಾ ಘಟಕಗಳು, ಸಂಗ್ರಹಣಾ ಗೋದಾಮುಗಳು ಮತ್ತು ಮಾರಾಟ ಕೇಂದ್ರಗಳ ಮೇಲೆ ನಿರಂತರ ತಪಾಸಣೆ ನಡೆಸಬೇಕು. ಒಂದೊಮ್ಮೆ ಪಿ.ಒ.ಪಿ ಬಳಸಿ ತಯಾರಿಸಿದ ಮೂರ್ತಿಗಳ ಸಂಗ್ರಹಣೆ, ಮಾರಾಟ ಕಂಡುಬAದಲ್ಲಿ ಸಂಬAಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವಾಗ ಸಮಿತಿಯವರು ಸ್ಥಳೀಯ ಸಂಸ್ಥೆಗಳಿ0ದ ಮತ್ತು ಧ್ವನಿವರ್ಧಕ ಬಳಸಲು ಪೋಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿಗಳನ್ನು ಪಡೆಯಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿ ವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಶಾಲಾ- ಕಾಲೇಜು, ಸಾಮಾಜಿಕ ಜಾಲತಾಣ ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ ಪ್ಲಾಸ್ಟರ್ ಆಪ್ ಪ್ಯಾರಿಸ್ ಮೂರ್ತಿಗಳಿಂದ ಆಗುವ ಅಪಾಯಗಳ ಕುರಿತು ಮತ್ತು ಪರಿಸರ ಸ್ನೇಹಿ ಮೂರ್ತಿಗಳ ಬಳಕೆಯ ಕುರಿತು ನಿರಂತರ ಜಾಗೃತಿ ಮೂಡಿಸಬೇಕು ಎಂದ ಅವರು, ಗಣೇಶ ವಿಸರ್ಜನಾ ಮೆರವಣಿಗೆಗಳು ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳಿ0ದ ಯಾವುದೇ ಅವಘಡಗಳು ಸಂಭವಿಸದAತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಜಿಲ್ಲಾ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಇ.ಓಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಚಿಕ್ಕಮಗಳೂರು: ದೇವೀರಮ್ಮ ಜಾತ್ರೆಗೆ ಹೊಸ ನಿಯಮ ಜಾರಿ; ಬೆಟ್ಟ ಏರುವ ಭಕ್ತರಿಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ – vishwanews24

ಚಿಕ್ಕಮಗಳೂರು: ದೇವೀರಮ್ಮ ಬೆಟ್ಟ ಏರಲು ಭಕ್ತರಿಗೆ ಹೊಸ ನಿಯಮ, ರಾತ್ರಿ ಸಂಚಾರಕ್ಕೆ ಬ್ರೇಕ್ ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಶಕ್ತಿದೇವತೆ ಬಿಂಡಿಗ…

16 hours ago

ಕಾಪು ಜೇಸಿಐಗೆ ವಲಯದ ಅತ್ಯುತ್ತಮ ಘಟಕ ಪ್ರಶಸ್ತಿ ಪ್ರದಾನ – vishwanews24

ಕಾಪು ಜೇಸಿಐಗೆ ವಲಯದ ಅತ್ಯುತ್ತಮ ಘಟಕ ಪ್ರಶಸ್ತಿ ಪ್ರದಾನ ಕಾಪು ಪರಿಸರದಲ್ಲಿ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಕಾಪು ಜೇಸಿಐಗೆ…

17 hours ago

ಅಗ್ನಿಪಥ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಬದಲಾವಣೆ ; ಅಗ್ನಿವೀರರಿಗೆ 2 ವರ್ಷ ಸೇವಾ ವಿಸ್ತರಣೆ – vishwanews24

ಅಗ್ನಿಪಥ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಬದಲಾವಣೆ .. ಅಗ್ನಿವೀರರ ಸೇವಾ ಅವಧಿ 2 ವರ್ಷ ವಿಸ್ತರಣೆ ನವದೆಹಲಿ: ಕೇಂದ್ರ…

17 hours ago

ಕಾರ್ಕಳ:  ಯುವತಿಗೂ ನ್ಯಾಯ ಸಿಗಬೇಕು ; ಪ್ರದೀಪ್ ಪೂಜಾರಿ ಸಾವಿಗೂ ನ್ಯಾಯ ದೊರೆಯಬೇಕು : ಶುಭದ ರಾವ್ – vishwanews24

ಕಾರ್ಕಳ:  ಯುವತಿಗೂ ನ್ಯಾಯ ಸಿಗಬೇಕು ; ಪ್ರದೀಪ್ ಪೂಜಾರಿಯ ಸಾವಿಗೂ ನ್ಯಾಯ ದೊರೆಯಬೇಕು : ಶುಭದ ರಾವ್ ಕಾರ್ಕಳ: ಪೆರ್ಡೂರಿನಲ್ಲಿ…

17 hours ago

ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ:  ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 16 ಗೋವುಗಳ ರಕ್ಷಣೆ – vishwanews24

ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 16 ಗೋವುಗಳ ರಕ್ಷಣೆ  ಮಂಗಳೂರು: ನಗರದ ಬೈಕಂಪಾಡಿ ಪರಿಸರದಲ್ಲಿ ಬುಧವಾರ ಮುಂಜಾನೆ…

17 hours ago

ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಕಡಿವಾಣ : ಒಂದಕ್ಕಿಂತ ಹೆಚ್ಚು ಮದುವೆಯಾದರೆ ಸರ್ಕಾರಿ ಉದ್ಯೋಗದಿಂದ ವಜಾ – vishwanews24

ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಕಡಿವಾಣ : ಒಂದಕ್ಕಿಂತ ಹೆಚ್ಚು ಮದುವೆಯಾದರೆ ಸರ್ಕಾರಿ ಉದ್ಯೋಗದಿಂದ ವಜಾ ದಿಸ್ಪುರ್ : ಅಸ್ಸಾಂ ಸರ್ಕಾರವು ಬಹುಪತ್ನಿತ್ವಕ್ಕೆ…

18 hours ago