Featured

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ – Vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ

ಉಡುಪಿ : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ 10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್.. ಕಾಪು ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ..

ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು.    ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಹಾಳಾಗುತ್ತದೆ. ಆದ್ದರಿಂದ ಬಕೆಟ್‌ನಲ್ಲಿ ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತç, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು.

ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಪರಿಸರ ಇಲಾಖೆಯ ಪ್ರಕಟಣೆ ತಿಳಿಸಿದೆ.

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ 10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್.. ಕಾಪು ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ..

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

3 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

3 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

3 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

3 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

3 hours ago