Featured

ಉಡುಪಿ :ಪರೇಶ್ ಮೇಸ್ತ ಪ್ರಕರಣ :-  ಬಿಜೆಪಿಗರ ನೈಜ ಬಣ್ಣ ಬಯಲು ಮಾಡುವ ಉದ್ದೇಶದಿಂದ ನ 24ರಂದು ಕುಮಟಾದಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ : ಐವನ್ ಡಿ’ಸೋಜಾ – Vishwanews24

ಉಡುಪಿ :ಪರೇಶ್ ಮೇಸ್ತ ಪ್ರಕರಣ :-  ಬಿಜೆಪಿಗರ ನೈಜ ಬಣ್ಣವನ್ನು ಬಯಲು ಮಾಡುವ ಉದ್ದೇಶದಿಂದ ನ 24ರಂದು ಕುಮಟಾದಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ: ಐವನ್ ಡಿ’ಸೋಜಾ

ಉಡುಪಿ: ಪರೇಶ್ ಮೇಸ್ತಾನ ಸಾವಿನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಜನರ ಭಾವನೆಗಳೊಂದಿಗೆ ಆಟವಾಡಿದ ಬಿಜೆಪಿಗರ ನೈಜ ಬಣ್ಣವನ್ನು ಬಯಲು ಮಾಡುವ ಉದ್ದೇಶದಿಂದ ನವೆಂಬರ್ 24ರಂದು ಕುಮಟಾದಲ್ಲಿ ರಾಜ್ಯ ಮಟ್ಟದ ಬೃಹತ್ ಜನಸಂಪರ್ಕ ಸಮಾವೇಶವನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಹೇಳಿದರು.

ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊನ್ನಾವರದ ಪರೇಶ ಮೇಸ್ತ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ಅಧಿಕಾರದ ಸೂತ್ರ ಹಿಡಿಯಿತು. ಪರೇಶ ಮೇಸ್ತ ಸಾವಿನ ನಂತರ ಜಿಲ್ಲಾದ್ಯಂತ 67 ವಿವಿಧ ಕಲಂ ಅಡಿಯಲ್ಲಿ2988 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. 361 ಜನರ ಬಂಧನವಾಯಿತು. 272 ಜನರ ಮೇಲೆ ರೌಡಿಶೀಟರ್‌ ಪ್ರಕರಣ ದಾಖಲಾಗಿದ್ದವು. 1699 ಜನರ ವಿರುದ್ಧ ಪೊಲೀಸರು ಕೋರ್ಟಿನಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

📛 ಪ್ರಭಲ ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ ; ಮೃತರ ಸಂಖ್ಯೆ 252ಕ್ಕೆ ಏರಿಕೆ – Vishwanews24

ಬಿಜೆಪಿಯ ಸುಳ್ಳಿನ ಪ್ರಚಾರದಿಂದ ಅನೇಕ ಯುವಕರ ಕುಟುಂಬಗಳು ಬೀದಿ ಪಾಲಾಗಿವೆ. ಪ್ರಕರಣವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿದ ಬಿಜೆಪಿ ಸಹಜ ಸಾವನ್ನು ಅನ್ಯಕೋಮಿನವರು ಹೊಡೆದು ಕೊಲೆ ಮಾಡಿದ್ದಾರೆ ಎಂದು ಬಿಂಬಿಸಿತು. ಇದು ರಾಜ್ಯಾದ್ಯಂತ ಕೋಮು ಸಂಘರ್ಷಕ್ಕೆ ಕಾರಣವೂ ಆಯಿತು. ಸುಳ್ಳಿನ ಮೂಟೆ ಕಟ್ಟಿದ ಬಿಜೆಪಿ ಕರಾವಳಿ ಭಾಗದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗುವಂತೆ ನೋಡಿಕೊಂಡಿತ್ತು. ಹೀಗಾಗಿ ಬಿಜೆಪಿ ಶಾಸಕರು ಪರೇಶ ಮೇಸ್ತ ಸಾವಿನ ಫಲಾನುಭವಿಗಳು. ಆದ ಕಾರಣ ಅವರು ತಕ್ಷಣ ರಾಜೀನಾಮೆ ನೀಡಬೇಕಿತ್ತು ಎಂದರು.

ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದಾಗ, ಸಿಬಿಐಗೆ ಒಪ್ಪಿಸುವಂತೆ ಬಿಜೆಪಿ ಪ್ರತಿಭಟಿಸಿತ್ತು. ಹೀಗಾಗಿ ಸಿದ್ದರಾಮಯ್ಯ ಸರಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿತ್ತು. ಸುದೀರ್ಘ 5 ವರ್ಷ ತನಿಖೆ ನಡೆಸಿದ ಸಿಬಿಐ ಪರೇಶ ಮೇಸ್ತನ ಸಾವು ಸಹಜ, ಕೊಲೆ ಅಲ್ಲಎಂದು ಕೋರ್ಟಿಗೆ ಬಿ ರಿಪೋರ್ಟ್‌ ನೀಡಿದೆ. ಇದರಿಂದ ಬಿಜೆಪಿಯ ಸುಳ್ಳಿನ ಮುಖವಾಡ ಕಳಚಿ ಬಿದ್ದಿದೆ ಎಂದರು.

ಪರೇಶ ಮೇಸ್ತ ಸಾವಿನ ನೈಧಿಜತೆ ಹಾಗೂ ಬಿಜೆಪಿಯ ನೈಜ ಬಣ್ಣ ಜನರ ಎದುರು ತೆರೆದಿಡಲು ಸಮಾನತೆ ಮತ್ತು ಸೌಹಾರ್ದತೆ ಎಂಬ ಧ್ಯೇಯ ವಾಕ್ಯದೊಂದಿಗೆ ಕುಮಟಾದಲ್ಲಿ ಬೃಹತ್‌ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಂಡಿದ್ದೇವೆ.

📛 ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ- Vishwanews24

ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವರು, ಹಾಲಿ ಶಾಸಕರು ಸೇರಿದಂತೆ ಸುಮಾರು ರಾಜ್ಯದ ಹಲವು ಮುಖಂಡರು ಪಾಲ್ಗೊಳ್ಳುವರು. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಸುಮಾರು 50 ಸಾವಿರ ಕಾರ್ಯಕರ್ತರು ಭಾಗವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ವಕ್ತಾರ ಭಾಸ್ಕರ್ ರಾವ್, ನಾಯಕರಾದ ಕೀರ್ತಿ ಶೆಟ್ಟಿ, ಕುಶಲ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

21 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

22 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

22 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

22 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

22 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

22 hours ago