ಉಡುಪಿ: ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಪರ್ಕಳದ ನಿವಾಸಿ ಕೆ.ಆರ್. ಅಶೋಕ್ ಅವರು ತಮ್ಮ ನಿವಾಸದ ಬಳಿ ಪ್ರತಿದಿನ ಬೀಡಾಡಿ ಗೋವುಗಳಿಗೆ ಉಚಿತವಾಗಿ ಆಹಾರ ನೀಡುತ್ತಿದ್ದಾರೆ.
ನಿತ್ಯ ಬರುವ ಗೋವುಗಳ ಪೈಕಿ ಒಂದಕ್ಕೆ ಚರ್ಮ ಗಂಟು ರೋಗದ ಲಕ್ಷಣಗಳು ಕಂಡುಬಂದಿದ್ದು, ದೇಹದ ಮೇಲಿನ ಗಾಯಗಳು ಉಲ್ಬಣಗೊಂಡಿರುವುದು ಗಮನಕ್ಕೆ ಬಂದಿದೆ.
ಗೋವಿನ ಸ್ಥಿತಿ ಕಂಡು ಕೆ.ಆರ್. ಅಶೋಕ್ ಅವರು ಸ್ವತಃ ಆರೈಕೆ ಮಾಡುತ್ತಿದ್ದು, ಗಾಯಗಳಿಗೆ ಅರಿಶಿನ ಹಚ್ಚಿ ಚಿಕಿತ್ಸೆ ನೀಡುವ ಪ್ರಯತ್ನ ಮಾಡುತ್ತಿದ್ದಾರೆ.
ಆದರೆ ಸಂಬಂಧಪಟ್ಟ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಔಷಧೋಪಚಾರ ಹಾಗೂ ಚಿಕಿತ್ಸೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೆಬೆಟ್ಟು ಮಾತನಾಡಿ, ಸೋಂಕು ಇತರ ಗೋವುಗಳಿಗೆ ಹರಡದಂತೆ ಜಿಲ್ಲಾಡಳಿತ ಮತ್ತು ಪಶು ಸಂಗೋಪನಾ ಇಲಾಖೆ ತಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…