ಉಡುಪಿ: ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.
ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮಣ್ಣು ಅಗೆಯುವ ಯಂತ್ರ ಬಳಸಿ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ವೇಳೆ, ಕಾಮಗಾರಿ ನಡೆಯುತ್ತಿರುವಾಗ ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.
ಈ ಹಿಂದೆ ಪರ್ಕಳ ಕೆಳಗಿನ ಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ಪರ್ಕಳ ನಗರ ಸಭಾ ಸದಸ್ಯ ರಾಮದಾಸ್ ನಾಯ್ಕ್ ಅವರು ಪ್ರಶ್ನೆ ಎತ್ತಿದಾಗ ಐಕೆರೆಯಲ್ಲಿ ಜೆಸಿಬಿ ಮೂಲಕ ಸುಮಾರು 15 ದಿನಗಳ ಕಾಲ ಮಣ್ಣು ತೆರವು ಮಾಡಿದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಐಕೆರೆಯಲ್ಲಿ ಕೆರೆಯ ಅಭಿವೃದ್ಧಿಯನ್ನು ದೊಡ್ಡ ಮಟ್ಟದಲ್ಲಿ ಕೈಗೆತ್ತಿಕೊಂಡ ನಂತರ ದೇವಾಲಯದ ಅವಶೇಷಗಳು ಪತ್ತೆಯಾಗಿರುವುದು ವಿಶೇಷ. ಸ್ಥಳೀಯ ನಿವಾಸಿ ಉಷಾ ನಾಯಕ್ ಅವರ ಮಾಹಿತಿ ಮೇರೆಗೆ ಸಮಾಜ ಸೇವಕ ಗಣೇಶ್ ರಾಜ್ ಸರಳಬೆಟ್ಟು ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೋಹನ್ ದಾಸ್ ನಾಯಕ್ ಪರ್ಕಳ, ಗಣೇಶ್ ಸಣ್ಣಕ್ಕಿ ಬೆಟ್ಟು ಮತ್ತಿತರರು ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…