Featured

ಉಡುಪಿ : ಪರ್ಕಳ ರಸ್ತೆ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ : ಪರ್ಕಳ ರಸ್ತೆ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ,: ರಾಷ್ಟಿçÃಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿಗೆ ಪರ್ಕಳ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಬಗೆಯ ಅಡೆತಡೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಿ, ನಿಗಧಿತ ಅವಧಿಯೊಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟಿçÃಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ನಿಂದ ತಡೆ ಇರುವ ಬಗ್ಗೆ ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು. ಕಾಮಗಾರಿಯ ಅನುಷ್ಠಾನಕ್ಕೆ ಈಗಾಗಲೇ ಸಾಕಷ್ಟು ಸಾರ್ವಜನಿಕ ಮೊತ್ತವನ್ನು ವೆಚ್ಚ ಮಾಡಿದ್ದು, ಕಾಮಗಾರಿಯು ಸ್ಥಗಿತಗೊಂಡರೆ ಮಳೆಗಾಲದ ವೇಳೆಯಲ್ಲಿ ಇದುವರೆಗೆ ಮಾಡಿರುವ ಕಾಮಗಾರಿ ಹಾಳಾಗುವ ಜೊತೆಗೆ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಸಹ ತೀವ್ರ ತೊಂದರೆಯಾಗಲಿದ್ದು, ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಈ ಬಗ್ಗೆ ವಕೀಲರ ಮೂಲಕ ಚರ್ಚಿಸಿ, ಕಾನೂನು ವ್ಯಾಪ್ತಿಯಲ್ಲಿ ಪ್ರಕರಣವನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿ, ಕಾಮಗಾರಿ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿಯ ಭೂ-ಸ್ವಾಧೀನ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಜಮೀನು ಮಾಲೀಕರುಗಳಿಗೆ ಸೂಕ್ತ ಪರಿಹಾರದ ಮೊತ್ತವನ್ನು ಆದ್ಯತೆಯಲ್ಲಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭೂ-ಸ್ವಾಧೀನಕ್ಕೆ ಸಂಬ0ಧಪಟ್ಟ ದಾಖಲೆಗಳಲ್ಲಿ ದೋಷಗಳಿದ್ದಲ್ಲಿ ತಕ್ಷಣದಲ್ಲಿ ಇತ್ಯರ್ಥಪಡಿಸುವಂತೆ ಭೂ ಧಾಖಲೆಗಳ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಎಂದು ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಉಡುಪಿ ತಹಸೀಲ್ದಾರ್ ಭೀಮಸೇನ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ರಾಷ್ಟಿçÃಯ ಹೆದ್ದಾರಿ 169ಎ ನ ಇಂಜನಿಯರ್ ನಾಗರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago