Featured

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್  -Vishwanews24

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್  -Vishwanews24

ಉಡುಪಿ  (Vishwanews24): ಉಡುಪಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 169ಎ ನಲ್ಲಿನ ಪರ್ಕಳ ಪೇಟವ್ಯಾಪ್ತಿಯ ರಸ್ತೆ ಅಗಲೀಕರಣ ಕಾರ್ಯವು ಏಪ್ರಿಲ್ 11 ರಿಂದ ಆರಂಭಗೊಳ್ಳಲಿದ್ದು, ಕಾಮಗಾರಿಗಾಗಿ ಭೂ ಸ್ವಾಧೀನಪಡಿಸಿಕೊಳ್ಳುವ 72 ಮಂದಿ ಭೂ ಮಾಲೀಕರಿಗೆ ರೂ.21.84 ಕೋಟಿ ರೂ ಭೂ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಬುಧವಾರ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ನಡೆದ, ಪರ್ಕಳ ಪ್ರದೇಶದ ಭೂ ಸಂತ್ರಸ್ಥರ ಸಭೆಯಲ್ಲಿ ಮಾತನಾಡಿದರು.

ಪರ್ಕಳ ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತಿದ್ದು ಇಲ್ಲಿ ರಸ್ತೆ ಅಗಲೀಕರಣ ಅತ್ಯಂತ ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ಈಗಾಗಲೇ ರಸ್ತೆ ಅಗಲೀಕರಣಕ್ಕೆ 3ಜಿ ಪ್ರಕಟವಾಗಿದ್ದು, ಏಪ್ರಿಲ್ 11 ರಿಂದ ಕಾಮಗಾರಿ ಆರಂಭಿಸಲಾಗುವುದು ಆದ್ದರಿಂದ ರಸ್ತೆ ಅಗಲೀಕರಣದಿಂದ ತಮ್ಮ ಕಟ್ಟಡ ಸಾಮಗ್ರಿಗಳು , ಮರಮುಟ್ಟು ಗಳಿಗೆ ಹಾನಿಯಾಗುವವರು ಕೂಡಲೇ ಅವುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವ0ತೆ ತಿಳಿಸಿದ ಜಿಲ್ಲಾಧಿಕಾರಿಗಳು , ಅವಶ್ಯವಿದ್ದಲ್ಲಿ ಈ ಕಾರ್ಯಕ್ಕೆ ಅಗತ್ಯ ನೆರವು ಒದಗಿಸಲಾಗುವುದು ಎಂದು ಡಿಸಿ ಹೇಳಿದರು.

ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24

ಭೂ ಪರಿಹಾರಕ್ಕಾಗಿ ನೋಟೀಸ್ ನೀಡಿದ 30 ದಿನದಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಪರಿಹಾರ ಪಡೆಯಬಹುದು, ಪರಿಹಾರ ಪಡೆದ ನಂತರ ಪರಿಹಾರದ ಮೊತ್ತ ಕಡಿಮೆ ಎನಿಸಿದ್ದಲ್ಲಿ 45 ದಿನಗಳ ಒಳಗೆ ಆರ್ಬಿಟರ್ ಮೂಲಕ ಮನವಿ ಸಲ್ಲಿಸಬಹುದಾಗಿದ್ದು , ಈ ಮನವಿಯು ನ್ಯಾಯುಯುತವಾಗಿದ್ದರೆ, ಹೆಚ್ಚಿನ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕರಿ ಜಿ.ಜಗದೀಶ್ ತಿಳಿಸಿದರು.

ಶಾಸಕ ರಘುಪತಿಭಟ್ ಮಾತನಾಡಿ, ಭೂಮಿ ಕೆಳದುಕೊಳ್ಳುವ ನಾಗರೀಕರಿಗೆ ಗರಿಷ್ಠ ಮೊತ್ತದ ಪರಿಹರ ನೀಡುತ್ತಿದ್ದು, ಜಿಲ್ಲೆಯ ಅಭಿವೃಧ್ದಿಯ ದೃಷ್ಠಿಯಿಯೀ ರಸ್ತೆ ಕಾಮಗಾರಿ ಅತ್ಯಂತ ಅವಶ್ಯಕವಾಗಿದ್ದು, ನಾಗರೀಕರು ಸಹಕರಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ ನಾಯಕ್ ಭೂ ಮಾಲಕರಿಗೆ ನೀಡಲಾಗುವ ಪರಿಹಾರದ ಕುರಿತು ಮಾಹಿತಿ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಪೌರಾಯುಕ್ತ ಉದಯ ಶೆಟ್ಟಿ, ಸಹಾಯಕ ಇಂಜಿನಿಯರ್ ಮಂಜುನಾಥ ನಾಯಕ್
ಹಾಗೂ ಭೂ ಮಾಲಕರು ಉಪಸ್ಥಿತರಿದ್ದರು.

ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago