ಉಡುಪಿ: 2022ನೇ ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಮಹೋತ್ಸವ ನಡೆಯಲಿದ್ದು, ಲಕ್ಷಾಂತರ ಮಂದಿ ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ನಗರದ ರಸ್ತೆಗಳ ಅಭಿವೃದ್ಧಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಉಡುಪಿ ನಗರಸಭೆಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರುಗಳ ನಿಯೋಗದೊಂದಿಗೆ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಅನುದಾನ ಬಿಡುಗಡೆ ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ಮುಗಿದ ತಕ್ಷಣ ಉಡುಪಿ ನಗರದ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಹಾಗೂ ಪರ್ಯಾಯ ಮಹೋತ್ಸವಕ್ಕೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭ ಶಾಸಕ ಕೆ ರಘುಪತಿ ಭಟ್ ಅವರು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರಿಗೆ ಉಡುಪಿ ಶ್ರೀ ಕೃಷ್ಣ ದೇವರ ಪ್ರಸಾದವನ್ನು ನೀಡಿ ಗೌರವಿಸಿದರು.
ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮಿ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…