ಉಡುಪಿ : ಉಡುಪಿಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ ಮತ್ತು ಜಿಲ್ಲೆಯ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಗಣ್ಯರಿಗೆ ಭೇಟಿ ಮಾಡಿ ಆಹ್ವಾನವನ್ನು ನೀಡಿದರು.
ಕಾರ್ಯಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಬಳಿಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ಉಪ ಮುಖ್ಯಮಂತ್ರಿಯವರಾದ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕರಾದ ಆರ್. ಅಶೋಕ್, ಗೃಹ ಸಚಿವರಾದ ಡಾಕ್ಟರ್ ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸದಸ್ಯರಾದ ಬಿ. ಕೆ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಉಡುಪಿ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿ ಉಡುಪಿಯ ಜನತೆಯ ಪರವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರಾದ ವಿ. ಸುನೀಲ್ ಕುಮಾರ್, ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳಿ ಹಾಗೂ ಪರ್ಯಾಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…