Featured

ಉಡುಪಿ : ಪರ್ಯಾಯಕ್ಕೆ ಹಣ ಬಿಡುಗಡೆ ಮಾಡುತ್ತೇವೆ ಎಂಬ ಯಾವುದೇ ಆಶ್ವಾಸನೆ ಸರಕಾರ ನೀಡಿರಲಿಲ್ಲ‌: ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ : ಪರ್ಯಾಯಕ್ಕೆ ಹಣ ಬಿಡುಗಡೆ ಮಾಡುತ್ತೇವೆ ಎಂಬ ಆಶ್ವಾಸನೆಯನ್ನೂ ಸರಕಾರ ನೀಡಿರಲಿಲ್ಲ‌: ಪ್ರಸಾದ್ ರಾಜ್ ಕಾಂಚನ್

ಉಡುಪಿ :ಉಡುಪಿ ಪರ್ಯಾಯೋತ್ಸವಕ್ಕೆ ಸರಕಾರದಿಂದ ಹಣವನ್ನು ಬಿಡುಗಡೆ ಮಾಡುವಂತೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಹಣ ಬಿಡುಗಡೆ ಮಾಡುತ್ತೇವೆ ಎಂಬ ಆಶ್ವಾಸನೆಯನ್ನೂ ಸರಕಾರ ನೀಡಿರಲಿಲ್ಲ‌. ಹೀಗಾಗಿ ಶಾಸಕರು ಪರ್ಯಾಯದ ಹಣ ಬಂದಿಲ್ಲ ಎನ್ನುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಸ್ಪಷ್ಟ ಪಡಿಸಿದ್ದಾರೆ.

ನಗರದ ಖಾಸಗಿ ಹೋಟೆಲಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಉಡುಪಿ ಪರ್ಯಾಯೋತ್ಸವದ ಕಮಿಟಿಯಲ್ಲಿ ನಾನು ಇದ್ದೆ. ಹಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ವಿನಂತಿಸಲಾಗಿತ್ತು. ಸರಕಾರವು ಬಿಡುಗಡೆ ಮಾಡುತ್ತೇವೆ ಎಂದು ಹೇಳಿಲ್ಲ. ಆಶ್ವಾಸನೆ ನೀಡಿ, ಬಿಡುಗಡೆ ಮಾಡದೇ ಇದ್ದಲ್ಲಿ ತಪ್ಪು. ಆದರೆ ಸರಕಾರ ಈ ಬಗ್ಗೆ ಯಾವುದೇ ಆಶ್ವಾಸನೆ ನೀಡಿರಲಿಲ್ಲ‌ ಎಂದವರು ತಿಳಿಸಿದರು.

ಉಡುಪಿ ಶಾಸಕರು ಜಿಲ್ಲೆಯಲ್ಲಿ 40 ಸಾವಿರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ ಜಿಲ್ಲೆಯಲ್ಲಿ ಇದುವರೆಗೆ 38,765 ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದು, ಅದರಲ್ಲಿ 37,395 ಕಾರ್ಡುದಾರರು ವಾರ್ಷಿಕ 1.20 ಲಕ್ಷ ಆದಾಯವನ್ನು ಹೊಂದಿರುವುದರಿಂದ ರದ್ದಾಗಿದೆ. ಬಡವರ ಬಿಪಿಎಲ್ ಕಾರ್ಡ್ ಗಳು ರದ್ದಾಗಿವೆ ಎಂಬ ಶಾಸಕರ ಹೇಳಿಕೆ ದಾಖಲೆಯನ್ನು ಕೊಡಲಿ. ಇಲ್ಲವಾದಲ್ಲಿ ರಾಜಿನಾಮೆ ನೀಡುವುದು ಜಂಟಲ್ ಮ್ಯಾನ್ ನ ಲಕ್ಷಣ ಎಂದರು‌.

ರಾಜ್ಯ ಸರಕಾರ ದಿವಾಳಿಯಾಗಿದೆ ಎಂಬ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರಕಾರ ದಿವಾಳಿಯಾಗಿದೆ ಎನ್ನುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ಕೇಂದ್ರದಿಂದ ಈ ಜಿಲ್ಲೆಗೆ ಎಷ್ಟು ಅನುದಾನ ಬಂದಿದೆ‌. ದೇಶದ ಬಜೆಟ್ 48 ಲಕ್ಷ ಕೋಟಿ. ರಾಜ್ಯದ ಬಜೆಟ್ 3.50 ಲಕ್ಷ ಕೋಟಿ. ಅದರಲ್ಲಿ 2 ಸಾವಿರ ಕೋಟಿಯನ್ನು ಈ ಕ್ಷೇತ್ರಕ್ಕೆ ತರಲಾಗದವರು ಯಾಕೆ ಶಾಸಕ ಸ್ಥಾನದಲ್ಲಿ ಇರಬೇಕು. ಮೋದಿಯವರ ಬಳಿ ಹೋಗಿ ಅನುದಾನ ಕೇಳಲಿ, ಅವರಿಗೆ ಭಯವಾದರೇ ನಮ್ಮನ್ನು ಕರೆದುಕೊಂಡು ಹೋಗಲಿ, ನಾವು ಅವರೊಂದಿಗೆ ಮಾತನಾಡುತ್ತೇವೆ ಎಂದರು.

ಶಾಸಕರಾಗಿ 1 ವರ್ಷ 4 ತಿಂಗಳು ಕಳೆದಿವೆ. ಇಂದ್ರಾಳಿ ರೈಲ್ವೇ ಮೇಲ್ಸೆತುವೆ, ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ, ಮಲ್ಪೆ – ಹೆಬ್ರಿ ರಾಷ್ಟ್ರೀಯ ಹೆದ್ದಾರಿಯ ಆದಿ ಉಡುಪಿ ಭಾಗದ ಸಮಸ್ಯೆ ಪರಿಹಾರವಾಗಿಲ್ಲ. ಕೋಮುಗಲಭೆ ಸೃಷ್ಟಿಸಿ ಶಾಸಕರಾಗಿದ್ದಾರೆ. ಆದರೆ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಇದ್ದಲ್ಲಿ ಮುಂದಿನ ಬಾರಿಗೆ ಜನರು ಆರ್ಶೀವಾದ ಮಾಡುವುದಿಲ್ಲ ಎಂದರು.

ಸಿದ್ದರಾಮಯ್ಯ ಅವರು ಬಡವರಿಗೆ, ದೀನ ದುರ್ಬಲರಿಗೆ ನೀಡಿದ್ದಷ್ಟು ಅನುದಾನ ಬೇರೆ ಯಾವ ಮುಖ್ಯಮಂತ್ರಿಯೂ ನೀಡಿಲ್ಲ. ಆದರೆ ಉಡುಪಿ ಶಾಸಕರ ಕಚೇರಿ ಯಾವಾಗಲೂ ಬಾಗಿಲು ಹಾಕಿರುತ್ತದೆ. ಕ್ಷುಲ್ಲಕ ಕಾರಣಗಳಿಗೆ ಶಾಸಕರು ಪತ್ರಿಕಾಗೋಷ್ಠಿ ನಡೆಸುವ ಬದಲು, ಈ ಭಾಗದ ಯುವ ಜನಾಂಗಕ್ಕೆ ಉದ್ಯೋಗವನ್ನು ಸೃಷ್ಟಿಸಲಿ. ಕ್ಷೇತ್ರದ ಅಭಿವೃದ್ಧಿಗೆ ಅವರೊಂದಿಗೆ ನಾವು ಕೈ ಜೋಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಾವರ ಕಾಂಗ್ರೆಸ್ ಮುಖಂಡ ದಿನಕರ್ ಹೇರೂರು, ಎನ್.ಎಸ್.ಯು.ಐ ಮುಖಂಡ ಶರತ್ ಕುಂದರ್ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago