Featured

ಉಡುಪಿ : ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ – vishwanews24

ಉಡುಪಿ : ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

  ಉಡುಪಿ : ಉಡುಪಿ ನಗರದಲ್ಲಿ ಜನವರಿ 2026 ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆ, ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ, ಕಾನೂನು ಸುವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

 ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಹೊರ ಜಿಲ್ಲೆ, ರಾಜ್ಯ, ದೇಶವಿದೇಶಗಳಿಂದ ಹೆಚ್ಚಿನ ಭಕ್ತರು ಉಡುಪಿ ನಗರಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಾಹನಗಳ ಸುಗಮ ಸಂಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಜನರ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಶ್ರೀಕೃಷ್ಣ ಮಠದ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದರು

 ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ರಸ್ತೆಗಳ ದುರಸ್ತಿಯನ್ನು ಗುಣಮಟ್ಟದೊಂದಿಗೆ ಕೈಗೊಳ್ಳಬೇಕು. ದಾರಿದೀಪಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದ ಅವರು, ನಗರದ ಶುಚಿತ್ವ ಕಾಪಾಡಲು ಹೆಚ್ಚು ಪೌರ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಪೌರಾಯುಕ್ತರಿಗೆ ಸೂಚನೆ ನೀಡಿದರು.

 ಮಠದ ಆವರಣದಲ್ಲಿ ಜನಜಂಗುಳಿಯಾಗಿ ಜನರ ಸಂಚಾರಕ್ಕೆ ತೊಂದರೆ ಉಂಟಾಗದAತೆ ಅಗತ್ಯವಿರುವಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಬಂದೋಬಸ್ತ್ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವುದರೊಂದಿಗೆ ಕಂಟ್ರೋಲ್ ರೂಮ್ಗಳು ದಿನದ ಇಪ್ಪನಾಲ್ಕು ಗಂಟೆ ಕಾರ್ಯಾಚರಿಸುವಂತೆ ನೋಡಿಕೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಶ್ರೀಕೃಷ ಮಠದ ಆವರಣದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊA ತಂಡದ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ರಚಿಸುವುದರೊಂದಿಗೆ ಆಂಬುಲೆನ್ಸ್ ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು

ಪರ್ಯಾಯ ಮಹೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಕೆ.ಎಸ್.ಆರ್.ಟಿ.ಸಿ ಬಸ್ಗಳ ಸೌಲಭ್ಯವನ್ನು ಕಲ್ಪಿಸಬೇಕು ಎಂದ ಅವರು, ಸ್ಥಳೀಯ ಪ್ರವಾಸಿ ತಾಣಗಳನ್ನು ಭೇಟಿ ನೀಡಲು ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ವ್ಯವಸ್ಥೆ ಮಾಡಬೇಕು ಎಂದರು.

ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು. ಅಗ್ನಿಶಾಮಕ ಹೆಚ್ಚುವರಿ ವಾಹನಗಳನ್ನು ನಿಯೋಜಿಸಬೇಕು. ಪರ್ಯಾಯೋತ್ಸವ ಅಂಗವಾಗಿ ವಾಹನಗಳಲ್ಲಿ ಹೊರೆ ಕಾಣಿಕೆಗಳು ಬರಲಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಗಳಾಗದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು

 ಪುರ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಾಲ ತಂಡಗಳು, ಸ್ಥಬ್ಧ ಚಿತ್ರಗಳು ಭಾಗವಹಿಸಲಿದ್ದು, ಇವುಗಳು ಶಿಸ್ತುಬದ್ಧವಾಗಿ ಸಾಗುವ ರೀತಿ ನೋಡಿಕೊಳ್ಳಬೇಕು ಎಂದ ಅವರು, ಮೆರವಣಿಗೆ ಸಾಗುವ ದಾರಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿದ್ದಲ್ಲಿ ಅವುಗಳನ್ನು ಗುರುತಿಸುವುದರೊಂದಿಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜನ ಸಂದಣಿ ಹೆಚ್ಚಾಗಲಿರುವುದರಿಂದ ಯಾವುದೇ ಅವಘಡಗಳು ಸಂಭವಿಸದAತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ವಾಹನಗಳು ಹೆಚ್ಚು ಆಗಮಿಸುವ ಸಾಧ್ಯತೆಗಳಿರುವ ಹಿನ್ನೆಲೆ, ಅವುಗಳಿಗೆ ಸೂಕ್ತ ಪಾರ್ಕಿಂಗ್ ಸ್ಥಳ ನಿಗಧಿಪಡಿಸಬೇಕು. ಊರ ಹಬ್ಬದ ರೀತಿಯಲ್ಲಿ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಎಂದರು.

 ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಮಠದ ದಿವಾನರದ ಡಾ. ಉದಯ್ ಕುಮಾರ್ ಸರಳತ್ತಾಯ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಸ್ವಾಗತ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago