ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಜ್ಜಾದ ಶ್ರೀ ಕೃಷ್ಣ ನಗರಿ -Vishwanews24

ಉಡುಪಿ: ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನ ಪೂಜೆಗಾಗಿ ಜ. 18ರಂದು ಸರ್ವಜ್ಞ ಪೀಠಾರೋಹಣಗೈಯಲಿದ್ದು, ಈ ಪರ್ಯಾಯ ಮಹೋತ್ಸವಕ್ಕೆ ಶ್ರೀಕೃಷ್ಣ ನಗರ ಸಂಪೂರ್ಣ ಸಜ್ಜುಗೊಂಡಿದೆ. ಜ. 8ರಂದು ಪುರಪ್ರವೇಶ ಮಾಡಿದ ಅನಂತರ ಉಡುಪಿ ಪೂರ್ಣ ಪರ್ಯಾಯಕ್ಕೆ ತಯಾರಾಗಿದೆ. ಜ.18ರಂದು ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರು ಪರ್ಯಾಯ ಪೀಠಾರೋಹಣಗೈಯಲಿದ್ದಾರೆ. ಅಂದು ಮುಂಜಾವ ಪೂಜೆಯ ಅಧಿಕಾರವನ್ನು ಅಕ್ಷಯ ಪಾತ್ರೆ, ಸಟ್ಟುಗ, ಗರ್ಭಗುಡಿಯ ಕೀಲಿಕೈ ನೀಡಿ ಸರ್ವಜ್ಞ ಪೀಠದಲ್ಲಿ ಕುಳ್ಳಿರಿಸಿ ಹಸ್ತಾಂತರಿಸಲಾಗುತ್ತದೆ.

ಜ. 17ರ ಮಧ್ಯರಾತ್ರಿ ಬಳಿಕ ಜ. 18ರ ಮುಂಜಾವ ಪರ್ಯಾಯೋತ್ಸವ ಈ ತೆರನಾಗಿ ನಡೆಯಲಿದೆ.
 ತಡರಾತ್ರಿ 1.20ಕ್ಕೆ ಕಾಪು ದಂಡತೀರ್ಥದಲ್ಲಿ ಪವಿತ್ರ ಸ್ನಾನ
 1.50ಕ್ಕೆ ಜೋಡುಕಟ್ಟೆ ಮಂಟಪದಲ್ಲಿ ಪಟ್ಟದ ದೇವರ ಪೂಜೆ, ಪರ್ಯಾಯ ಮೆರವಣಿಗೆ ಆರಂಭ
 ಮುಂಜಾವ 4.50ಕ್ಕೆ ಕನಕನ ಕಿಂಡಿಯಲ್ಲಿ ಕೃಷ್ಣದರ್ಶನ, ಚಂದ್ರ ಮೌಳೀಶ್ವರ, ಅನಂತೇಶ್ವರ ದರ್ಶನ  5.30ಕ್ಕೆ ಶ್ರೀಕೃಷ್ಣ ಮಠ ಪ್ರವೇಶ  
 5.57ಕ್ಕೆ ಅಕ್ಷಯಪಾತ್ರೆ ಸ್ವೀಕಾರ, ಸರ್ವಜ್ಞ ಪೀಠಾರೋಹಣ
10ಕ್ಕೆ ಮಹಾಪೂಜೆ
 11ರ ಬಳಿಕ ಅನ್ನಸಂತರ್ಪಣೆ
 ಅಪರಾಹ್ನ 2.30ಕ್ಕೆ ಪರ್ಯಾಯ ದರ್ಬಾರ್‌ ಸಭೆ
 ಸಂಜೆ 7.30ಕ್ಕೆ ರಥೋತ್ಸವ

ಅದಮಾರು ಪರ್ಯಾಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪರಿಸರದ ವಿಷಯದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಶ್ರೀಗಳು ಈ ಬಾರಿಯ ಪರ್ಯಾಯದಲ್ಲಿ ಪರಿಸರ ಸ್ನೇಹಿ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಪರ್ಯಾಯ ಮಹೋತ್ಸವ ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತವಾಗಲಿದೆ. ಶುಭ ಕೋರಲು ವಸ್ತ್ರದ ಬ್ಯಾನರ್‌ಗಳನ್ನು ಬಳಸಲಾಗಿದೆ. ಬೃಹತ್‌ ಅಕರ್ಷಕ ಕಟೌಟ್‌ಗಳು, ಸ್ವಾಗತ ಕಮಾನುಗಳು ಕೂಡ ವಸ್ತ್ರದಿಂದಲೇ ನಿರ್ಮಾಣವಾಗಿವೆ.

ಕಿನ್ನಿಮೂಲ್ಕಿಯಿಂದ ರಥಬೀದಿಯವರೆಗೆ ಸಾವಿರಕ್ಕೂ ಅಧಿಕ ಹಳೆ ಶೈಲಿಯ ಗೂಡುದೀಪಗಳು ಮತ್ತು 10 ಲಕ್ಷಕ್ಕೂ ಅಧಿಕ ಮಿನಿಯೇಚರ್‌ ಲೈಟ್‌ಗಳನ್ನು ಹಾಕಲಾಗಿದೆ. ರಾತ್ರಿ ವೇಳೆಯೂ ಈ ಪರಿಸರ ಹಗಲಿನಂತೆ ಕಂಗೊಳಿಸುತ್ತಿದೆ. ಇದೇ ಮೊದಲ ಬಾರಿಗೆ ರಥಬೀದಿ ತುಂಬಾ ಆರ್‌ಜಿಬಿ ಲೈಟ್‌ಗಳನ್ನು ಹಾಕಲಾಗಿದೆ. ಒಂದೇ ಬಲ್ಬ್ ಮೂಲಕ 7 ಬಣ್ಣಗಳು ಕಂಗೊಳಿಸುವುದು ಇದರ ವೈಶಿಷ್ಟéವಾಗಿದೆ. ಪರ್ಯಾಯ ವೈಭವಕ್ಕೆ ಮತ್ತಷ್ಟು ರಂಗು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಜಾನಪದ ತಂಡಗಳು ಉಡುಪಿಗೆ ಆಗಮಿಸಲಿವೆ. ಮೆರವಣಿಗೆಯಲ್ಲೂ ಪೌರಾಣಿಕ ಮತ್ತು ಐತಿಹಾಸಿಕ ಸಂದೇಶಗಳನ್ನು ಸಾರುವ ಟ್ಯಾಬ್ಲೋಗಳಿಗೆ ಆದ್ಯತೆ ನೀಡಲಾಗಿದೆ. ಸ್ಥಳೀಯ ನಗರಸಭೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಿ.ಪಂ.ನಿಂದ ವಿಶೇಷ ಟ್ಯಾಬ್ಲೋಗಳು ಇರಲಿವೆ. ಶ್ರೀಕೃಷ್ಣ ಸೇವಾ ಬಳಗದ ಉಸ್ತುವಾರಿಯಲ್ಲಿಯೂ ಹಲವಾರು ಟ್ಯಾಬ್ಲೋಗಳು ಪ್ರದರ್ಶನಗೊಳ್ಳಲಿವೆ.

ವೈವಿಧ್ಯಮಯ ಕಲಾತಂಡಗಳು
ಮೆರವಣಿಗೆಗೆ ಇಂಬು ನೀಡಲು ಟ್ಯಾಬ್ಲೋಗಳ ಜತೆಗೆ ವಿವಿಧ ಕಲಾತಂಡಗಳು ಕೂಡ ಸಾಥ್‌ ನೀಡಲಿವೆ. ಪೂರ್ಣಕುಂಭ, ಬಿರುದಾವಳಿ, 4 ಗೊಂಬೆ ತಂಡಗಳು, 7 ಚೆಂಡೆ ಬಳಗ, 1 ಪಂಚವಾದ್ಯ, 20 ಜನರ ಕೊಂಬು ವಾದನ ತಂಡ, ದೇವಸ್ಥಾನದ ಪಂಚವಾದ್ಯಗಳು, ನಾಗಸ್ವರ ತಂಡ, ಸ್ಯಾಕ್ಸೋಫೋನ್‌ ತಂಡ, ಚೆಂಡೆ ಮತ್ತು ಕೋಲಾಟ ತಂಡ, ತಮಟೆ ಮತ್ತು ನಗಾರಿ ತಂಡ, ತಾಲೀಮು, ಮರಕಾಲು ಕುಣಿತ, ಭಾರತ ಸೇವಾದಳ, ರೇಂಜರ್-ರೋವರ್, ಭಜನ ತಂಡಗಳು, ಬಣ್ಣದ ಕೊಡೆಗಳು ಸಹಿತ ಹಲವಾರು ಬಗೆಯ ಕಲಾಪ್ರಕಾರಗಳು ಮನೋರಂಜನೆ ನೀಡಲಿವೆ.

ಸಿದ್ಧಗೊಂಡಿದೆ ಬರ್ಫಿ, ಅಕ್ಕಿ ವಡೆ
ಶ್ರೀಕೃಷ್ಣ ಮಠ ಪಾರ್ಕಿಂಗ್‌ ಏರಿಯಾ ಬಳಿಯ ಬೈಲಕೆರೆ ಸೇರಿಗಾರ ಕುಟುಂಬಸ್ಥರ ಸುಮಾರು ಒಂದೂವರೆ ಎಕರೆ ಸ್ಥಳದಲ್ಲಿ ಪ್ರಸಾದ ತಯಾರಿ ಮತ್ತು ವಿತರಣೆಗಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಪರ್ಯಾಯೋತ್ಸವದಲ್ಲಿ ಅನ್ನಸಂತರ್ಪಣೆಗಾಗಿ 100ಕ್ಕೂ ಅಧಿಕ ಬಾಣಸಿಗರಿಂದ ಭೋಜನದ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಬೆಲ್ಲದ ಪಾಕದಿಂದ ತಲಾ 60 ಸಾವಿರ ಕಾಳು ಲಾಡು, ಗೋಧಿ ಹಿಟ್ಟಿನ ಬರ್ಫಿ, 1.2 ಲಕ್ಷ ಅಕ್ಕಿ ವಡೆ ತಯಾರಿಸಲಾಗಿದೆ.

ಪರ್ಯಾಯ ಮಹೋತ್ಸವ ವೀಕ್ಷಿಸಲು ಬರುವವರಿಗೆ ಶ್ರೀಕೃಷ್ಣ ಸೇವಾ ಬಳಗದಿಂದ ಹೊಸ ಪರಿಕಲ್ಪನೆಯ ಪರಿಸರಸ್ನೇಹಿ ಪ್ಲಾಸ್ಟಿಕ್‌ ಮುಕ್ತ ದರ್ಬಾರು ಪಾಸ್‌ಗಳನ್ನು ನೀಡಲಾಗುತ್ತದೆ. ಈ ಪಾಸ್‌ಗಳಲ್ಲಿ ತುಳಸಿ ಬೀಜಗಳನ್ನು ಅಳವಡಿಸಲಾಗಿದ್ದು, ಮನೆಗೆ ಹೋದ ಅನಂತರ ನೀರಿಗೆ ಹಾಕಬಹುದು. ಬೀಜಗಳು ಚಿಗುರೊಡೆಯಲಿದ್ದು, ಪರಿಸರ ಸ್ನೇಹಕ್ಕೆ ಆದ್ಯತೆ ನೀಡಲಾಗಿದೆ.

ಪರ್ಯಾಯ ದರ್ಬಾರ್‌ನಲ್ಲಿ ಭಾಗವಹಿಸಲಿರುವ ಗಣ್ಯರು
ಜ.18ರಂದು ಅಪರಾಹ್ನ 2.30ಕ್ಕೆ ನಡೆಯುವ ಪರ್ಯಾಯ ದರ್ಬಾರಿನಲ್ಲಿ ಅಷ್ಟಮಠಗಳ‌ ಯತಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಮೈಸೂರು ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಕೇಂದ್ರ ಆಯುಷ್‌ ಸಚಿವ ಶ್ರೀಪಾದ್‌ ನಾಯ್ಕ, ವಿಧಾನ ಪರಿಷತ್‌ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಸಂಸದೆ ಶೋಭಾ ಕರಂದ್ಲಾಜೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವೀರಪ್ಪ ಮೊಲಿ, ಉದ್ಯಮಿ ಡಾ| ಜಿ.ಶಂಕರ್‌, ಭೀಮಾ ಜುವೆಲರ್ನ ವ್ಯವಸ್ಥಾಪಕ ಪಾಲುದಾರ ವಿಷ್ಣುಶರಣ್‌ ಕೆ.ಭಟ್‌, ಬರೋಡ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮುರಳೀ ರಾಮಸ್ವಾಮಿ, ಕೆನರಾ ಬ್ಯಾಂಕ್‌ನ ಆಡಳಿತ ನಿರ್ದೇಶಕ ಶಂಕರ್‌ ನಾರಾಯಣ ಆರ್‌.ಎ., ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್‌., ಸಿಂಡಿಕೇಟ್‌ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ, ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ಚೀಫ್ ಜನರಲ್‌ ಮ್ಯಾನೇಜರ್‌ ಅಭಿಜಿತ್‌ ಮುಜುಂದಾರ್‌, ಎಲ್‌ಐಸಿಯ ಹಿರಿಯ ವಿಭಾಗೀಯ ವ್ಯವಸ್ಥಾಪಕ ಅನಂತಪದ್ಮನಾಭ ಕೆ., ಐಸಿಐಸಿಐ ಬ್ಯಾಂಕ್‌ನ ಪ್ರಾಂತೀಯ ಮುಖ್ಯಸ್ಥ ಚಲಮ್‌ ಮೂರ್ತಿ ಸಹಿತ ಹಲವಾರು ಮಂದಿ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದರು.

ಸುಬ್ರಹ್ಮಣ್ಯ ಮಾರ್ಪಳ್ಳಿ, ಪ್ರಶಾಂತ್‌ ರಾವ್‌, ವೈ.ಎನ್‌. ರಾಮಚಂದ್ರ, ಜಗದೀಶ್‌ ಶೆಟ್ಟಿ, ದಿನೇಶ್‌ ಪುತ್ರನ್‌, ಸುವರ್ಧನ್‌ ನಾಯಕ್‌, ಮಂಜುನಾಥ ಮಣಿಪಾಲ ಉಪಸ್ಥಿತರಿದ್ದರು.

ಜ. 17ರಂದು ಸಾಯಂಕಾಲ 7 ಗಂಟೆಗೆ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರನ್ನು ಶ್ರೀಕೃಷ್ಣ ಸೇವಾ ಬಳಗದ ವತಿಯಿಂದ ಗೌರವಿಸಲಾಗುತ್ತದೆ. ಶ್ರೀಕೃಷ್ಣ ಮಠದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ ನಿರ್ಗಮನ ಪರ್ಯಾಯ ಪಲಿಮಾರು ಮಠದಿಂದ ನಡೆಯಲಿದೆ. ರಾತ್ರಿ 7 ಗಂಟೆಗೆ ನಿರ್ಗಮನ ಪರ್ಯಾಯ ಶ್ರೀಗಳಿಗೆ ಅಭಿನಂದನ ಕಾರ್ಯಕ್ರಮ ರಥಬೀದಿಯಲ್ಲಿ ನಡೆಯಲಿದ್ದು, ಬಳಿಕ ಸಾರ್ವಜನಿಕರಿಗೆ ಭೋಜನ ವ್ಯವಸ್ಥೆ ಅದಮಾರು ಮಠದಿಂದ ಜರಗಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago