ಉಡುಪಿ: ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.
ಸುಧಾಕರ ಕಾಂಚನ್ ಇವರು ಹೆಚ್.ಡಿ.ಎಫ್.ಸಿ ಬ್ಯಾಂಕ್, ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಪಿರ್ಯಾದಿದಾರರಿಗೆ ಪಾನ್‌ಕಾರ್ಡ್ ಅಪ್ಡೇಟ್ ಮಾಡಲು ಸಂದೇಶ ಕಳುಹಿಸಿದ್ದ.
ಸದ್ರಿ ಸಂದೇಶದಲ್ಲಿರುವ ಲಿಂಕ್‌ನ್ನು ಬ್ಯಾಂಕ್‌ನಿಂದ ಕಳುಹಿಸಿರುವುದಾಗಿದೆ ಎಂದು ಪಿರ್ಯಾದಿದಾರರು ನಂಬಿ ಸದ್ರಿ ಲಿಂಕ್‌ನಲ್ಲಿ ವಿವರವನ್ನು ಅಪೌಡೇಟ್ ಮಾಡಿದ್ದಾರೆ. ಬಳಿಕ ಅವರ ಖಾತೆಯಿಂದ ರೂ.1,00,000/- ಹಣ ಆನ್ ಲೈನ್ ಮುಖೇನ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ. ಯಾರೋ ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದುದಾರರನ್ನು ವಂಚಿಸಿ ಮೋಸದಿಂದ ಹಣ ವರ್ಗಾವಣೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 29/2023 ಕಲಂ 66(C), 66(D), ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…