ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಉಡುಪಿಯಲ್ಲಿ (Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶವಿದ್ದಂತಿದೆ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ.
ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು, ಈಗ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದಿದ್ದಾರೆ.
ಮಣಿಪಾಲ: ಕರಾವಳಿಯಲ್ಲಿ ಎನ್ಐಎ ಘಟಕ ಆರಂಭಕ್ಕೆ ಸಂಸತ್ ನಲ್ಲಿ ವಿಷಯ ಪ್ರಸ್ತಾಪ: ತೇಜಸ್ವಿ ಸೂರ್ಯ – Vishwanews24
ಭಯೋತ್ಪಾದನೆ ಸದೆಬಡಿಯುವ ತನಕ ನಾವು ವಿಶ್ರಮಿಸಲ್ಲ. ನಮ್ಮ ಸರ್ಕಾರಗಳು ವಿಶ್ರಮಿಸುವುದಿಲ್ಲ. ಈವರೆಗೆ ರಾಜ್ಯದಲ್ಲಿ ದೊಡ್ಡಮಟ್ಟದ ಚಟುವಟಿಕೆ ನಡೆದಿಲ್ಲ. ಈ ಒಂದು ಘಟನೆ ರಾಜ್ಯವನ್ನು ಎಚ್ಚರಿಸಲಿದೆ. ಕರಾವಳಿಯಲ್ಲೇ ಒಂದು ಎನ್‍ಐಎ ಆಫೀಸ್ ಬೇಕಾಗಿದೆ. ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ. ಕರಾವಳಿಯಲ್ಲಿ ಎನ್‍ಐಎ ಕ್ಯಾಂಪ್ ಆಫೀಸ್ ಸ್ಥಾಪನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಕೆಜೆಹಳ್ಳಿ ಡಿಜೆಹಳ್ಳಿ ಪ್ರಕರಣವಾದಾಗಲೇ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೆ. ಈಗ ಮತ್ತೆ ಕೇಂದ್ರ ಸರ್ಕಾರ ಜೊತೆ ಮಾತನಾಡುತ್ತೇನೆ.
ಪೊಲೀಸ್ ಇಂಟೆಲಿಜನ್ಸ್ ಎನ್‍ಐಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು. ರಾಜ್ಯದ ಜನರ ಜೀವ ಮತ್ತು ವಸ್ತುಗಳ ಸಂರಕ್ಷಣೆ ನಮ್ಮ ಕರ್ತವ್ಯ. ನಾವು ಓಟ್ ಬ್ಯಾಂಕ್‍ಗೆ ಮುಲಾಜು ಬಿದ್ದು ರಾಜಕೀಯ ಮಾಡಲ್ಲ. ರಾಷ್ಟ್ರೀಯ ರಾಜ್ಯದ ಸುರಕ್ಷತೆಗೆ ನಮ್ಮ ಆದ್ಯತೆಯಿದೆ. ದೇಶದ ಸುರಕ್ಷತೆ ವಿಚಾರದಲ್ಲಿ ಕಾಂಪ್ರಮೈಸ್ ಮಾಡಲ್ಲ ಎಂದು ಹೇಳಿದ್ದಾರೆ.
⏺️ ಆಸ್ಪತ್ರೆಯಲ್ಲಿ ದಾಖಲಾತಿ ನಿರಾಕರಣೆ – ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…