ಉಡುಪಿ: ರಾಜ್ಯದಲ್ಲಿ ನಡೆದಿರುವ ಪಿಎಸ್ಐ ಹಗರಣ ದಿನಕ್ಕೊಂದು ತಿರುವು ಪಡೆಯುತ್ತ, ಬಗೆದಷ್ಟೂ ಆಳ ಎಂಬಂತಾಗುತ್ತಿದ್ದು, ಇದೀಗ ಆ ಸಂಬಂಧವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಗೂ ಇದೀಗ ಆಪ್ ಮುಖಂಡರಾಗಿರುವ ಭಾಸ್ಕರ್ ರಾವ್ ಮಹತ್ವದ ಸಂಗತಿಯೊಂದನ್ನು ಹೇಳಿದ್ದಾರೆ.
ಇಂದು ಉಡುಪಿಯಲ್ಲಿ ಮಾತನಾಡಿರುವ ಅವರು, ಪಿಎಸ್ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು ಎಂಬುದಾಗಿ ತಿಳಿಸಿದ್ದಾರೆ. ನಾನು ಬೆಂಗಳೂರು ನಗರ ಪೋಲಿಸ್ ಆಯುಕ್ತ ಆಗಿದ್ದಾಗ ಅಮೃತ್ ಪೌಲ್ ಮುಂದಿನ ಕಮಿಷನರ್ ಆಗುತ್ತಾರೆ ಎಂಬ ಸುದ್ದಿ ಇತ್ತು. ಆಗಾಗ್ಯೆ ಮುಖ್ಯಮಂತ್ರಿ ಮನೆಗೆ ಬರುವಾಗ ಕೂಡ ನಾನು ಪ್ರಶ್ನೆ ಮಾಡಿದ್ದೆ. ಇದು ಹಗರಣ ಎಂಬುವುದಾಗಿ ನನಗೆ ಮೊದಲೇ ಗೊತ್ತಿತ್ತು ಎಂದಿರುವ ಅವರು, ರಾಜ್ಯಪಾಲರ ಬಳಿಗೆ ಈ ವಿಷಯವನ್ನು ಕೊಂಡೊಯ್ದ ಮೊದಲ ಪಕ್ಷ ಆಮ್ ಆದ್ಮಿ ಎಂಬುದಾಗಿಯೂ ಅವರು ಹೇಳಿದ್ದಾರೆ.
ಇದನ್ನೂ ಓದಿ :ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್ – Vishwanews24
ಇನ್ನು ತನಿಖೆ ಆಗುವವರೆಗೂ ಪರೀಕ್ಷೆ ಮಾಡುವುದಿಲ್ಲ ಎನ್ನುವುದು ತಪ್ಪು ನೀತಿ. ನೀವು ಯುವಜನರಿಗೆ ಮೋಸ ಮಾಡುತ್ತಿದ್ದೀರಿ. ಇಡೀ ಪರೀಕ್ಷೆಯನ್ನೇ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆಯನ್ನು ನಡೆಸಿ ಎಂದಿರುವ ಅವರು, ಸಿಐಡಿ ಒಳಗೆ ಹೋದ ಮೇಲೆ ಹೋಂ ಮಿನಿಸ್ಟರ್ ಮತ್ತು ಸಿಎಂ ಇನ್ವೆಸ್ಟಿಗೇಶನ್ ಆಫೀಸರ್ ಆಗುತ್ತಾರೆ. ಇದು ನ್ಯಾಯಾಂಗದಲ್ಲಿ ತನಿಖೆ ಆಗಬೇಕು ಎಂದು ನಾನು ಮೊದಲೇ ಆಗ್ರಹ ಮಾಡಿದ್ದೆ. ನ್ಯಾಯಾಂಗ ತನಿಖೆ ಆರಂಭ ಆದ 24 ಗಂಟೆಗಳಲ್ಲಿ ಅಮೃತ್ ಪೌಲ್ ಬಂಧನವಾಗಿದೆ ಎಂದು ಅವರು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…