ಉಡುಪಿ : ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯನ್ನು https://www.kviconline.gov.in/pmegpeportal/jsp/pmegponline.jsp ವೆಬ್‌ಸೈಟ್ ಮೂಲಕ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬAಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885 / 080-25665883 ಹಾಗೂ ಪ್ರಾದೇಶಿಕ ಕಛೇರಿ, ಕಾಯರ್ ಬೋರ್ಡ್, ನಂ: 3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು, ದೂ.ಸಂಖ್ಯೆ: 080-28375023 ಇವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಹಾಗೂ ಉಡುಪಿ, ಕಾರ್ಕಳ ಅಥವಾ ಕುಂದಾಪುರ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವoತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…