Featured

ಉಡುಪಿ : ಪಿ.ಎಂ.ಇ.ಜಿ.ಪಿ ಯೋಜನೆ: ಅರ್ಜಿ ಆಹ್ವಾನ -Vishwanews24

ಉಡುಪಿ : ಪಿ.ಎಂ.ಇ.ಜಿ.ಪಿ ಯೋಜನೆ: ಅರ್ಜಿ ಆಹ್ವಾನ -Vishwanews24

ಉಡುಪಿ : ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯನ್ನು https://www.kviconline.gov.in/pmegpeportal/jsp/pmegponline.jsp ವೆಬ್‌ಸೈಟ್ ಮೂಲಕ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬAಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885 / 080-25665883 ಹಾಗೂ ಪ್ರಾದೇಶಿಕ ಕಛೇರಿ, ಕಾಯರ್ ಬೋರ್ಡ್, ನಂ: 3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು, ದೂ.ಸಂಖ್ಯೆ: 080-28375023 ಇವರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಹಾಗೂ ಉಡುಪಿ, ಕಾರ್ಕಳ ಅಥವಾ ಕುಂದಾಪುರ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವoತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

11 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

12 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

16 hours ago