Featured

ಉಡುಪಿ: ಪಿ.ಎಂ ವಿಶ್ವಕರ್ಮ ಯೋಜನೆ : ನೋಂದಣಿಗೆ ಸೂಚನೆ – vishwanews24

ಉಡುಪಿ: ಪಿ.ಎಂ ವಿಶ್ವಕರ್ಮ ಯೋಜನೆ : ನೋಂದಣಿಗೆ ಸೂಚನೆ

   ಉಡುಪಿ: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ, ಕುಂಬಾರಿಕೆ, ಶಿಲ್ಪಿ, ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಿಕರು / ತೆಂಗಿನನಾರಿನ ಕೆಲಸಗಾರರು, ಗೊಂಬೆ  / ಆಟಿಕೆ ತಯಾರಕರು, ಕ್ಷೌರಿಕ, ಹೂಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆಗಳನ್ನು ನೇಯ್ಗೆ ಮಾಡುವವರು ಮುಂತಾದ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ಜಿಲ್ಲೆಯಲ್ಲಿ ಸುಮಾರು 13,500 ವಿವಿಧ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಂಡಿದ್ದು, ಈವರೆಗೂ ನೋಂದಣಿ ಮಾಡದೇ ಇರುವ ಕುಶಲಕರ್ಮಿಗಳೂ ಸಹಾ ನೋಂದಣಿ ಮಾಡಿಕೊಳ್ಳಬಹುದಾಗಿದೆ.

  ಮೇಲ್ಕಂಡ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರುವ, 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿರುವವರು ಕಳೆದ 5 ವರ್ಷಗಳಲ್ಲಿ ಸ್ವಯಂ ಉದ್ಯೋಗ / ವ್ಯಾಪಾರ ಅಭಿವೃದ್ಧಿಗಾಗಿ ಕ್ರೆಡಿಟ್ ಆಧಾರಿತ ಯೋಜನೆಗಳ ಅಡಿಯಲ್ಲಿ ಸಾಲವನ್ನು ಪಡೆದಿರಬಾರದು. ಆದಾಗ್ಯೂ ತಮ್ಮ ಸಾಲವನ್ನು ಮರುಪಾವತಿ ಮಾಡಿದ ಮುದ್ರಾ ಮತ್ತು ಪಿ.ಎಂ ಸ್ವನಿಧಿಯ ಫಲಾನುಭವಿಗಳು ಪಿ.ಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ನೋಂದಣಿಗೆ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರಾಗಿದ್ದು, ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು

   ಕುಶಲಕರ್ಮಿಗಳು ಸಂಬ0ಧಿಸಿದ ಗ್ರಾಮ ಪಂಚಾಯತ್ / ನಗರಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೌಲಭ್ಯ ಕೇಂದ್ರದಲ್ಲಿ ಮತ್ತು ಆಧಾರ ಆಧಾರಿತ ಬಯೋಮೆಟ್ರಿಕ್ ದೃಢೀಕೃತ ಪಿ.ಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ (ಆಧಾರ್ ಲಿಂಕ್ಡ್), ಬ್ಯಾಂಕ್ ಖಾತೆ ವಿವರಗಳು, ರೇಷನ್ ಕಾರ್ಡ್ಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ. ನೊಂದಣಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

   ನೋಂದಣಿಗೆ ಸಂಬ0ಧಿಸಿದ0ತೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ ಎಚ್. ಮೊ.ಸಂಖ್ಯೆ: 7217623877, 8217840512 ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಪ್ರಸನ್ನಕುಮಾರ ಮೊಬೈಲ್ ಸಂಖ್ಯೆ: 7019032011 ಅನ್ನು ಸಂಪರ್ಕಿಸಬಹುದಾಗಿದೆ.

  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಶಿವಳ್ಳಿ ಕೈಗಾರಿಕಾ ಕೇಂದ್ರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕುಗಳಿಗೆ ಸಂಬAಧಿಸಿದAತೆ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಮೊ.ಸಂಖ್ಯೆ: 9448623952 ಹಾಗೂ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕುಗಳಿಗೆ ಸಂಬAಧಿಸಿದAತೆ ಸಹಾಯಕ ನಿರ್ದೇಶಕ ಜಿ. ವಾಮನ ನಾಯ್ಕ ಮೊ.ಸಂಖ್ಯೆ: 9448409488 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago